ಹೊಸ ದಿಗಂತ ಆನ್ ಲೈನ್ ಡೆಸ್ಕ್:
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಂದು ಮತ್ತೆ ಸಾರಿಗೆ ನೌಕರರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.
ಬೆಂಗಳೂರಿನ ಶಾಂತಿನಗರದ ಬಿಎಂಟಿಸಿ ಕೇಂದ್ರ ಕಚೇರಿಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದು, ಮಧ್ಯಾಹ್ನ 1 ಗಂಟೆಯಿಂದ 2 ಗಂಟೆಯವರೆಗೆ ಪ್ರತಿಭಟನೆ ನಡೆಸಿ ನಂತರ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಪತ್ರ ಸಲ್ಲಿಸಲಾಗುವುದು. ಬಸ್ ಸಂಚಾರದಲ್ಲಿ ಯಾವುದೇ ವ್ಯತ್ಯಯವಾಗುವುದಿಲ್ಲ ಎಂದು ಬಿಎಂಟಿಸಿ ಕಾರ್ಮಿಕರ ಸಂಘದ ಅಧ್ಯಕ್ಷ ಎಚ್ಡಿ ರೇವಪ್ಪ ತಿಳಿಸಿದ್ದಾರೆ.
ಗುತ್ತಿಗೆ ಆಧಾರದಲ್ಲಿ ಎಲೆಕ್ಟ್ರಿಕ್ ಬಸ್ ಪಡೆಯುವ ಯೋಜನೆ ಕೈಬಿಡುವುದು, ಪೂರ್ಣ ಪ್ರಮಾಣದಲ್ಲಿ ನಾಲ್ಕು ಪಾಳಿಯಲ್ಲಿ ಬಸ್ ಕಾರ್ಯಾಚರಿಸುವುದು, ಪೂರ್ಣ ವೇತನ ಪಾವತಿ, ಬಾಕಿ ವೇತನ ಬಿಡುಗಡೆ, ವಾರದ ರಜೆ ಸೇರಿದಂತೆ ವಿವಿಧಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಇಂದು ಪ್ರತಿಭಟನೆ ನಡೆಸುತ್ತಿದ್ದಾರೆ.