Tuesday, July 5, 2022

Latest Posts

ಇಂದು ಸುಪ್ರೀಂ’ನಲ್ಲಿ ನಟಿ ರಾಗಿಣಿ ಜಾಮೀನು ಅರ್ಜಿ ವಿಚಾರಣೆ: ಮತ್ತೆ ಜೈಲಾ? ಬೇಲಾ?

ಹೊಸದಿಗಂತ ಆನ್ ಲೈನ್ ಡೆಸ್ಕ್:

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ತಿಂಗಳಿಂದ ಜೈಲುವಾಸ ಅನುಭವಿಸುತ್ತಿರುವ ನಟಿ ರಾಗಿಣಿಯ ಜಾಮೀನು ಅರ್ಜಿಯನ್ನು ಇಂದು ಸುಪ್ರೀಂ ಕೈಗೆತ್ತಿಕೊಳ್ಳಲಿದೆ.

ನ.3ರಂದು ಕರ್ನಾಟಕ ಹೈಕೋರ್ಟ್ ನಲ್ಲಿ ಜಾಮೀನು ಸಿಗದ ಹಿನ್ನಲೆ ನಟಿ ರಾಗಿಣಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಬಗ್ಗೆ ಸೆ.23ರಂದು ಸುಪ್ರೀಂ ಗೆ ಅರ್ಜಿ ಸಲ್ಲಿಸಿದ್ದು, ಇಂದು ವಿಚಾರಣೆ ನಡೆಯಲಿದೆ.

ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿ ಸೆ.4ರಂದು ನಟಿ ರಾಗಿಣಿಯನ್ನು ಸಿಸಿಬಿ ವಶಕ್ಕೆ ಪಡೆದಿತ್ತು. ಸತತ 3 ತಿಂಗಳಿಂದ ತುಪ್ಪದ ಬೆಡಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss