Thursday, July 7, 2022

Latest Posts

ಇಟ್ಟಿಗಟ್ಟಿ ಬಳಿ ನಡೆದ ಅಪಘಾತ: ಸಾವಿನ ಸಂಖ್ಯೆ ಏರಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಜ.15 ರಂದು ಧಾರವಾಡ ತಾಲೂಕಿನ ಇಟ್ಟಿಗಟ್ಟಿ ಬಳಿ ಟೆಂಪೋ ಟ್ರ್ಯಾವೆಲರ್​ ಮತ್ತು ಟಿಪ್ಪರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಿಸದೆ ಭಾನುವಾರ (ಜ.24) ಸಾವನ್ನಪ್ಪಿದ್ದಾರೆ.
ದಾವಣಗೆರೆಯಿಂದ ಗೆಳತಿಯರ ಜೊತೆಗೆ ಗೋವಾಕ್ಕೆ ತೆರಳುತ್ತಿದ್ದಾಗ ನಡೆದಿದ್ದ ಅಪಘಾತದಲ್ಲಿ 9 ಮಹಿಳೆಯರು ಸೇರಿ ಒಟ್ಟು 11 ಜನರು ಸಾವನ್ನಪ್ಪಿದ್ದರು. ಈ ವೇಳೆ ತೀವ್ರ ಗಾಯಗೊಂಡಿದ್ದ ವೇದಾ ಮಂಜುನಾಥ ಅವರನ್ನು ಅಂಬ್ಯುಲೆನ್ಸ್ ಮೂಲಕ ಬೆಂಗಳೂರಿಗೆ ಸಾಗಿಸಲಾಗಿತ್ತು. ತಲೆಗೆ ತೀವ್ರ ಪೆಟ್ಟಾದ ಹಿನ್ನೆಲೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತ ಮಹಿಳೆ ಶಿವಮೊಗ್ಗದ ಮಾಜಿ ಶಾಸಕ ಎಚ್.ಎಂ.ಚಂದ್ರಶೇಖರ್​ ರ ಸಂಬಂಧಿಯಾಗಿದ್ದು, ಕುಟುಂಬ ಸದಸ್ಯರು ಮಹಿಳೆಯ ಅಂಗಾಂಗಗಳನ್ನು ಬೆಂಗಳೂರು ಮಣಿಪಾಲ್ ಆಸ್ಪತ್ರೆಗೆ ದಾನ ಮಾಡಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss