Sunday, July 3, 2022

Latest Posts

ಇಡೀ ರಾಜ್ಯದಲ್ಲಿ ಮತ್ತೊಮ್ಮೆ ಲಾಕ್ ಡೌನ್ ಮಾಡಬೇಕು: ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಸೋಂಕು ಮಿತಿಮೀರುತ್ತಿದ್ದು, ಇದನ್ನು ತಡೆಯಲು ಸರ್ಕಾರ ಬೆಂಗಳೂರಿನಲ್ಲಿ ಒಂದು ವಾರದ ಲಾಕ್ ಡೌನ್ ವಿಧಿಸಿದ್ದು ಉತ್ತಮ ನಡೆ. ಆದರೆ ಇಡೀ ರಾಜ್ಯದಲ್ಲಿ ಲಾಕ್ ಡೌನ್ ಮಾಡಬೇಕು ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಆಗ್ರಹಿಸಿದ್ದಾರೆ.

ನಮಗೆ ಆರೋಗ್ಯವೇ ಭಾಗ್ಯ. ಆದ್ದರಿಂದ ದಯವಿಟ್ಟು ಮನೆಯಿಂದ ಹೊರ ಹೋಗಬೇಕಾದರೆ ದಯವಿಟ್ಟು ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಏನೇ ಮುಟ್ಟಬೇಕಾದರು ಸ್ಯಾನಿಟೈಸರ್ ನಿಂದ ಕೈಯನ್ನು ಸ್ವಚ್ಛ ಗೊಳಿಸಿ ನಂತರ ಮುಟ್ಟಿ. ಮುಖ್ಯವಾದ ಕೆಲಸ ಕಾರ್ಯಗಳು ಇದ್ದರೆ ಮಾತ್ರ ಮನೆಯಿಂದ ಹೊರ ಬನ್ನಿ ಎಂದು ಮಾಜಿ ಪ್ರಧಾನಿಗಳು ಜನತೆಯಲ್ಲಿ ಮನವಿ ಮಾಡಿದ್ದಾರೆ.

ಕೋವಿಡ್-19 ವೈರಸ್ ತಡೆಗಟ್ಟಲು ರಾಜ್ಯ ಸರ್ಕಾರ ಅನೇಕ ಪ್ಯಾಕೇಜುಗಳನ್ನು ಘೋಷಿಸಿದೆ. ಅದರಲ್ಲಿ ಅವ್ಯವಹಾರ ನಡೆದಿದೆ ಎಂದು ಅನೇಕ ನಾಯಕರುಗಳು ಆಪಾದಿಸುತ್ತಿದ್ದಾರೆ. ಅದೇನೇ ಇದ್ದರೂ ಮುಂಬರುವ ಅಧಿವೇಶನದಲ್ಲಿ ಚರ್ಚೆಮಾಡಲಿ. ಈಗ ನಮಗೆ ಜನತೆಯ ಆರೋಗ್ಯ ಮುಖ್ಯ. ಮೊದಲು ನಾವೆಲ್ಲ ಅದರ ಕಡೆ ಗಮನ ಹರಿಸೋಣ ಸರ್ಕಾರವು ಸಹ ಇದರ ನಿಟ್ಟಿನಲ್ಲಿ ಕೆಲಸ ಮಾಡಬೇಕು. ನಾವೆಲ್ಲ ಜೊತೆಗಿದ್ದೀವಿ ಜನತೆಯ ಆರೋಗ್ಯದ ಜೊತೆ ಚೆಲ್ಲಾಟ ಬೇಡ. ಇನ್ನು ಮುಂದಾದರು ಎಚ್ಚೆತ್ತು ಕೆಲಸ ಮಾಡಿ ಎಂದು ಎಚ್ ಡಿಡಿ ಮನವಿ ಮನವಿ ಮಾಡಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss