Friday, July 1, 2022

Latest Posts

ಇತ್ಯರ್ಥವಾಗಿರುವ ವಿಷಯವನ್ನು ಕೆಣಕಲು‌ ಬರಬೇಡಿ: ಠಾಕ್ರೆಗೆ ಸಿದ್ದರಾಮಯ್ಯ ಎಚ್ಚರಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಬೆಳಗಾವಿ ಬಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೀಡಿರುವ ಹೇಳಿಕೆಯನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಖಂಡಿಸಿದ್ದಾರೆ. 

ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ನಮ್ಮ ಬೆಳಗಾವಿ ಬಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೀಡಿರುವ ಅಧಿಕಪ್ರಸಂಗತನದ ಹೇಳಿಕೆ ಖಂಡನೀಯ. ಬೆಳಗಾವಿ ಕರ್ನಾಟಕ ರಾಜ್ಯದ ಅವಿಭಾಜ್ಯ ಅಂಗ. ಇತ್ಯರ್ಥವಾಗಿರುವ ವಿಷಯವನ್ನು ಕೆಣಕಲು‌ ಬರಬೇಡಿ ಎಂದು ಎಚ್ಚರಿಕೆ ನೀಡಿದ್ದಾರೆ.

ಬೆಳಗಾವಿ ಗಡಿ ಬಗ್ಗೆ ಮಹಾಜನ ವರದಿಯೇ ಅಂತಿಮ. ಉದ್ಧವ್ ಠಾಕ್ರೆ ಅವರೇ, ಇತ್ಯರ್ಥವಾಗಿರುವ ವಿಷಯವನ್ನುವ ಕೆಣಕಿ ರಾಜಕೀಯ ಮಾಡಲು ಹೋಗಬೇಡಿ. ಈಗ ನೀವು ಕೇವಲ ಶಿವಸೈನಿಕ ಅಲ್ಲ, ಜವಾಬ್ದಾರಿಯುತ ಸ್ಥಾನದಲ್ಲಿರುವ ಮುಖ್ಯಮಂತ್ರಿ ಎನ್ನುವುದನ್ನು ಮರೆಯಬೇಡಿ ಎಂದಿದ್ದಾರೆ.

ಕರ್ನಾಟಕದ ನೆಲ-ಜಲ-ಭಾಷೆಯ ರಕ್ಷಣೆ ನಮ್ಮೆಲ್ಲರ ಕರ್ತವ್ಯ. ಈ ಬಗ್ಗೆ ರಾಜಿಯೂ ಇಲ್ಲ, ರಾಜಕೀಯವೂ ಇಲ್ಲ. ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಉದ್ಧಟತನದ ಹೇಳಿಕೆಗೆ ಸಿಎಂ ಯಡಿಯೂರಪ್ಪ ಅಧಿಕೃತವಾಗಿ ತಕ್ಕ ಪ್ರತ್ಯುತ್ತರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಠಾಕ್ರೆ ಅವರೇ ಕನ್ನಡಿಗರು ಶಾಂತಿಪ್ರಿಯರು, ಸಹನಶೀಲರು, ಸಹಬಾಳ್ವೆಯಲ್ಲಿ ನಂಬಿಕೆ ಇಟ್ಟವರು. ನಮ್ಮ ಸಜ್ಜನಿಕೆಯನ್ನು ದೌರ್ಬಲ್ಯ ಎಂದು ತಿಳಿಯಬೇಡಿ ಎಂದು ಎಚ್ಚರಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss