ಮಂಗಳೂರು: ರಾಜ್ಯದಲ್ಲಿ ದಿನೇ ದಿನೇ ಅಂತರ್ಜಲ ಪ್ರಮಾಣ ಗಣನೀಯವಾಗಿ ಕುಸಿಯುತ್ತಿರುವ ಪರಿಣಾಮ ರಾಜ್ಯದ ಕೆಲವು ಪ್ರದೇಶಗಳಲ್ಲಿ ಸದ್ಯಕ್ಕೆ ಹೊಸ ಕೊಳವೆ ಬಾವಿ ಕೊರೆಯದಂತೆ ಕರ್ನಾಟಕ ಅಂತರ್ಜಲ ಪ್ರಾಧಿಕಾರ ಅಧಿಸೂಚನೆ ಹೊರಡಿಸಿದೆ.
ಒಂದು ವೇಳೆ ನಿಯಮ ಉಲ್ಲಂಘಿಸಿದ್ರೆ ಕ್ರಿಮಿನಲ್ ಮೊಕದ್ದಮೆ ಸಹಿತ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ರವಾನಿಸಿದೆ.
ಅಂತರ್ಜಲ ಪ್ರಮಾಣ ಪ್ರಪಾತಕ್ಕೆ ಕುಸಿದಿರುವ ರಾಜ್ಯದ 15 ಜಿಲ್ಲೆಗಳಲ್ಲಿ 45 ತಾಲೂಕುಗಳನ್ನ ಅಧಿಸೂಚಿತ ಪ್ರದೇಶಗಳೆಂದು ಗುರಿತಿಸಲಾಗಿದೆ. ಇನ್ನು ಅಂತರ್ಜಲ ಬಳಕೆದಾರರರು ಕಡ್ಡಾಯವಾಗಿ ಕಡ್ಡಾಯವಾಗಿ ನೋಂದಾಣಿ ಮಾಡಿಸಿಕೊಳ್ಳಬೇಕಾಗುತ್ತದೆ.
ಪ್ರಾಧಿಕಾರ ಅಧಿಸೂಚನೆ ಹೊರಡಿಸಿರುವ ಜಿಲ್ಲೆಗಳ ಪಟ್ಟಿ ಈ ಹೀಗಿದೆ:ಬಾಗಲಕೋಟೆ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬೆಳಗಾವಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಗದಗ, ಕೋಲಾರ, ರಾಮನಗರ, ಹಾಸನ, ತುಮಕೂರು, ಚಿಕ್ಕಮಗಳೂರು.
ಈ ಜಿಲ್ಲೆಗಳಲ್ಲಿ ನಿಯಮ ಮೀರಿ ಕೊಳವೆ ಬಾವಿ ಕೊರೆಸಿದ್ದೇ ಆದಲ್ಲಿ ಕೊರೆಸಿದ ಭೂಮಾಲೀಕರಿಗೆ ಮತ್ತು ಕೊರೆಯುವ ಯಂತ್ರಗಳ ಮಾಲೀಕರನ್ನ ಅಪರಾಧಿಗಳೆಂದು ಘೋಷಿಸಲಾಗುವುದು. ಕ್ರಿಮಿನಲ್ ಮೊಕದ್ದಮೆಯ ಜೊತೆಗೆ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಪ್ರಾಧಿಕಾರ ತಿಳಿಸಿದೆ.