ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಯಾರು ಎಷ್ಟೇ ದೊಡ್ಡ ನಾಯಕರು ಆಗಿದ್ದರು ಪಕ್ಷದ ಶಿಸ್ತು ಉಲ್ಲಂಘಿಸುವಂತಿಲ್ಲ. ಇನ್ಮುಂದೆ ವ್ಯಕ್ತಿ ಪೂಜೆ ನಡೆಸಲು ಅವಕಾಶ ಇಲ್ಲ. ಕೇವಲ ಪಕ್ಷದ ಪೂಜೆ ಮಾತ್ರ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಾರ್ಯಕರ್ತರನ್ನು ಉದ್ದೇಶಿಸಿ ಹೇಳಿದರು.
ಹುಬ್ಬಳ್ಳಿಯ ಗೋಕುಲ ರಸ್ತೆಯ ಲೋಟಸ್ ಗಾರ್ಡನ್ನಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಅವರು, , ಪಕ್ಷದ ಪ್ರಮುಖರಿಗೆ ಸಖತ್ ಕ್ಲಾಸ್ ತೆಗೆದುಕೊಂಡರು. ಸಭೆ ನಡೆಸಿ, ಭಾಷಣ ಹೊಡೆದರೆ ಪಕ್ಷ ಸಂಘಟನೆ ಆಗೋದಿಲ್ಲ. ಯುದ್ದ ಕಾಲದಲ್ಲಿ ಶಸ್ತ್ರಾಭ್ಯಾಸ ಮಾಡೊದು ಬೇಡ. ಈಗಿನಿಂದಲೇ ಚುನಾವಣೆಗೆ ಸಿದ್ದರಾಗಿ ಎಂದು ಕರೆಕೊಟ್ಟರು.
ಐಸಿಸಿಯಿಂದ ರೈತ ಪರ ಹೋರಾಟ ರೂಪಿಸುವಂತೆ ಸೂಚನೆ ಬಂದಿದ್ದು, ಸಂಕ್ರಮಣ ಕಾರಣಕ್ಕೆ ಜನವರಿ 14ರಂದು ನಡೆಯಬೇಕಿದ್ದ ಹೋರಾಟ 20ಕ್ಕೆ ಮುಂದೂಡಲಾಗಿದೆ. ಜನವರಿ 20 ರಂದು ರಾಜಭವನ ಚಲೋ ಹೋರಾಟ ಆಯೋಜಿಸಲಾಗಿದೆ. ರಾಜ್ಯದ ಮೂಲೆ ಮೂಲೆಗಳಿಂದ ಜನ ಸೇರಿಸಬೇಕೆಂದು ಡಿಕೆಶಿ ಹೇಳಿದರು .
ಹುಬ್ಬಳ್ಳಿಯ ಕಾಂಗ್ರೆಸ್ ಸಂಕಲ್ಪ ಸಮಾವೇಶದಲ್ಲಿ ಸಿದ್ದರಾಮಯ್ಯ ನಿದ್ದೆಗೆ ಮೊರೆ ಹೋದರು. ಒಂದೆಡೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭಾಷಣ ಮಾಡುತ್ತಿದ್ದರೆ ಮತ್ತೊಂದೆಡೆ ಸಿದ್ದರಾಮಯ್ಯ ನಿದ್ರೆಗೆ ಜಾರಿದ್ದರು.
ಮಾಜಿ ಸಿಎಂ ಸಿದ್ಧರಾಮಯ್ಯ, ಸತೀಶ್ ಜಾರಕಿಹೊಳಿ, ಬಿ.ಕೆ. ಹರಿಪ್ರಸಾದ್, ರಾಮಲಿಂಗಾ ರೆಡ್ಡಿ, ಎಸ್.ಆರ್. ಪಾಟೀಲ್, ಕೆ.ಎಚ್ ಮುನಿಯಪ್ಪ, ಆರ್.ವಿ. ದೇಶಪಾಂಡೆ ಸಮಾವೇಶದಲ್ಲಿ ಭಾಗವಹಿಸಿದ್ದರು.