Wednesday, August 10, 2022

Latest Posts

ಇನ್ಮುಂದೆ ಹೆಲ್ಮೆಟ್‌ಗಳಲ್ಲಿ BIS ಮಾನದಂಡ ಕಡ್ಡಾಯ: ಕೇಂದ್ರ ಸರ್ಕಾರ ಚಿಂತನೆ

ನವದೆಹಲಿ: ಇನ್ಮುಂದೆ ಹೆಲ್ಮೆಟ್‌ಗಳನ್ನು ಕಡ್ಡಾಯವಾಗಿ ಬಿಐಎಸ್ ಮಾನದಂಡದ ವ್ಯಾಪ್ತಿಗೆ ತರುವ ಪ್ರಕ್ರಿಯೆಯನ್ನು ಕೇಂದ್ರ ಸರ್ಕಾರ ಪ್ರಾರಂಭಿಸಿದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ತಿಳಿಸಿದೆ.
ದ್ವಿಚಕ್ರ ವಾಹನಗಳಿಂದ ಸಂಭವಿಸುವ ಮಾರಣಾಂತಿಕ ಗಾಯಗಳನ್ನು ತಗ್ಗಿಸುವ ಪ್ರಯತ್ನದ ಭಾಗವಾಗಿ ಈ ತರಹದ ಚಿಂತನೆ ಕೇಂದ್ರ ಸರ್ಕಾರ ಮಾಡುತ್ತಿವೆ.
ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ ಕಾಯ್ದೆ 2016ರ ಪ್ರಕಾರ, ಕಡ್ಡಾಯ ಪ್ರಮಾಣೀಕರಣದಡಿಯಲ್ಲಿ ದ್ವಿಚಕ್ರ ವಾಹನ ಸವಾರರಿಗೆ ರಕ್ಷಣಾತ್ಮಕ ಹೆಲ್ಮೆಟ್‌ಗಳನ್ನು ತರಲು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಕರಡು ಅಧಿಸೂಚನೆ ಹೊರಡಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ದ್ವಿಚಕ್ರ ವಾಹನಗಳ ಹೆಲ್ಮೆಟ್‌ ಗುಣಮಟ್ಟ ಸುಧಾರಿಸುತ್ತದೆ. ರಸ್ತೆ ಸುರಕ್ಷತೆ ಇನ್ನಷ್ಟು ಸುಧಾರಿಸುತ್ತದೆ. ದ್ವಿಚಕ್ರ ವಾಹನಗಳಿಂದ ಸಂಭವಿಸುವ ಮಾರಣಾಂತಿಕ ಗಾಯಗಳನ್ನು ಕಡಿಮೆ ಮಾಡಲು ಸಹಕಾರಿಯಾಗುತ್ತದೆ ಎಂದು ಸ್ಪಷ್ಟನೆ ನೀಡಿದೆ.
ಈ ವಿಷಯದಲ್ಲಿ ಸಚಿವಾಲಯವು ಸಲಹೆಗಳನ್ನು ಆಹ್ವಾನಿಸಿದೆ. ಇದನ್ನು ಜಂಟಿ ಕಾರ್ಯದರ್ಶಿ (ಎಂವಿಎಲ್), ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯಕ್ಕೆ ಒಂದು ತಿಂಗಳ ಒಳಗೆ ಕಳುಹಿಸಬಹುದು

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss