ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, May 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಇರಾನ್ ನಲ್ಲಿರುವ ಭಾರತೀಯರ ಸ್ಥಳಾಂತರಕ್ಕೆ ತ್ರಿಖಂಡ್ ರವಾನೆ: ರವೀಶ್ ಕುಮಾರ್

ಹೊಸದಿಲ್ಲಿ: ಇರಾನ್ ಜನರಲ್ ಕಮಾಂಡರ್ ಖಾಸಿಂ ಸೊಲೆಮನಿ  ಹತ್ಯೆಯಿಂದ ಅಮೆರಿಕ ಮತ್ತು ಇರಾನ್ ದೇಶಗಳ ನಡುವೆ ಯುದ್ಧಭೀತಿ ಉಂಟಾಗಿದ್ದು, ಅಗತ್ಯವಿದ್ದರೆ ಇರಾನ್ ನಲ್ಲಿರುವ ಭಾರತೀಯರನ್ನು ಸ್ಥಳಾಂತರಿಸಲು ಐಎನ್ ಎಸ್ ತ್ರಿಖಂಡ್ ಕಳುಹಿಸುವುದಾಗಿ ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ಭಾರತೀಯ ನೌಕಾಪಡೆಯ ಹಡಗು ಐಎನ್ ಎಸ್ ತ್ರಿಖಂಡ್ ಕಳೆದ ವರ್ಷ ನವೆಂಬರ್ ನಿಂದ ಗಲ್ಫ್ ಆಫ್ ಒಮಾನ್ ನಲ್ಲಿದೆ. ಅಗತ್ಯವಿದ್ದಲ್ಲಿ ಇರಾನ್ ನಿಂದ ಭಾರತೀಯರನ್ನು ಬೇರೆಡೆಗೆ ಸ್ಥಳಾಂತರಿಸಲು ತ್ರಿಖಂಡ್ ಅನ್ನು ಕಳುಹಿಸಲಾಗುವುದು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಮೆರಿಕ ಇರಾನ್ ನಡುವಿನ ಭೌಗೋಳಿಕ-ರಾಜಕೀಯ ಸಂಘರ್ಷದ ಪರಿಸ್ಥಿತಿ ಬಗ್ಗೆ ಸೂಕ್ಷ್ಮವಾಗಿ ಅವಲೋಕಿಸಬೇಕಾಗುತ್ತದೆ ಎಂದಿದ್ದಾರೆ.

ಅಮೆರಿಕ ಮತ್ತು ಇರಾನ್ ದೇಶಗಳು ಯುದ್ಧಕ್ಕೆ ಸಜ್ಜಾಗದೆ ಮಾತುಕತೆ ಮೂಲಕ ಸಮಸ್ಯೆಗಳನ್ನು ಬಗೆಹರಿಸಿಕೊಂಡು ಶಾಂತಿ ಕಾಪಾಡಬೇಕು ಎಂದು ಕೇಂದ್ರ ಸರ್ಕಾರ ಮನವಿ ಮಾಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss