Monday, October 2, 2023

Latest Posts

ಇಲಾಖೆಯ ವರ್ಗಾವಣೆ, ಪೋಸ್ಟಿಂಗ್ ಗೆ ಸಿಎಂ ಅನುಮತಿ ಬೇಕು

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಇನ್ಮುಂದೆ ಯಾವುದೇ ಇಲಾಖೆಯ ವರ್ಗಾವಣೆ, ಪೋಸ್ಟಿಂಗ್ ಗೆ ಸಿಎಂ ಅನುಮತಿ ಪಡೆಯುವುದು ಕಡ್ಡಾಯ ಎಂದು ಸರ್ಕಾರ ಖಡಕ್ ಆದೇಶ ಹೊರಡಿಸಿದೆ.

ಯಾವುದೇ ರೀತಿಯ ಅವಧಿಪೂರ್ವ ವರ್ಗಾವಣೆಗಳನ್ನು ಹಾಗೂ ಸಾಮಾನ್ಯ ವರ್ಗಾವಣಾ ಅವಧಿ ಮುಗಿದ ನಂತರ ಯಾವುದೇ ವರ್ಗಾವಣೆಗಳನ್ನು ಮತ್ತು ಸರ್ಕಾರಿ ನೌಕರರು ಒಂದು ಸ್ಥಳದಲ್ಲಿರಬಹುದಾದ ಅವಧಿ ವಿಸ್ತರಿಸಿ ಮಾಡುವ ವರ್ಗಾವಣೆಗಳನ್ನು ಮಾಡುವ ಮುನ್ನ ಸಚಿವಾಲಯದ ಆಡಳಿತ ಇಲಾಖೆಗಳು ಮುಖ್ಯಮಂತ್ರಿಯವರ ಅನುಮೋದನೆಯನ್ನು ತಪ್ಪದೇ ಪಡೆಯತಕ್ಕದ್ದು, ಸರ್ಕಾರದ ಪ್ರಧಾನ ಕಾರ್ಯದರ್ಶಿ/ಕಾರ್ಯದರ್ಶಿಯವರು ಯಾವುದೇ ಪುಸಂಗದಲ್ಲಿ ಮೊದಲು ವರ್ಗಾವಣೆಗಳನ್ನು ಮಾಡಿ ನಂತರ ಮಾನ್ಯ ಮುಖ್ಯಮಂತ್ರಿಯವರ ಘಟನೋತ್ತರ ಅನುಮೋದನೆ ಪಡೆಯತಕ್ಕದ್ದಲ್ಲ ಎಂದು ತಿಳಿಸಿದೆ.

ಇನ್ನು ಮುಂದೆ ಯಾವುದೇ ಇಲಾಖೆಯಲ್ಲಿ ವರ್ಗಾವಣೆಗಳನ್ನು ಆಡಳಿತಾತ್ಮಕ ಮತ್ತು ಸಾರ್ವಜನಿಕ ಹಿತದೃಷ್ಟಿಯಿಂದ ಮಾಡುವುದು ಅತ್ಯಗತ್ಯವಾಗಿದ್ದಲ್ಲಿಮುಖ್ಯಮಂತ್ರಿಯವರ ಪೂರ್ವಾನುಮೋದನೆಯನ್ನು ಪಡೆಯತಕ್ಕದ್ದು ಎಂದು ಈ ಮೂಲಕ ಸೂಚಿಸಿದೆ. ಒಂದು ವೇಳ ಪೂರ್ವಾನುಮೋದನೆಯನ್ನು ಪಡೆಯದೇ ಯಾವುದೇ ವರ್ಗಾವಣೆಗಳನ್ನು ಮಾಡಿದಲ್ಲಿ ಸಂಬಂಧಪಟ್ಟ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು/ ಪ್ರಧಾನ ಕಾರ್ಯದರ್ಶಿಗಳು/ ಕಾರ್ಯದರ್ಶಿಗಳು ಹಾಗೂ ಇಲಾಖಾ ಮುಖ್ಯಸ್ಥರನ್ನು ನೇರ ಜವಾಬ್ದಾರರನ್ನಾಗಿಸಿ ಅವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸುತ್ತಾ, ಸರ್ಕಾರದ ಸೂಚನೆಯನ್ನು ಚಾಚೂತಪ್ಪದ ಪಾಲಿಸತಕ್ಕದ್ದೆಂದು ಸ್ಪಷ್ಟಪಡಿಸಿದೆ.

2023-24ನೇ ಸಾಲಿಗೆ ಗ್ರೂಪ್-ಎ, ಬಿ, ಸಿ ಮತ್ತು ಡಿ ವರ್ಗದ ಅಧಿಕಾರಿ/ನೌಕರರಿಗೆ ಅನ್ವಯವಾಗುವಂತೆ ಒಂದು ಜೇಷ್ಠತಾ ಘಟಕದಲ್ಲಿ ಕಾರ್ಯನಿರತ ವೃಂದ ಬಲದ ಶೇಕಡಾ 6 ರಷ್ಟನ್ನು ಮೀರದಂತೆ ದಿನಾಂಕ:01.06.2023 ರಿಂದ 03,07,2023 ರವರೆಗೆ ಸಾರ್ವತ್ರಿಕ ವರ್ಗಾವಣೆಗಳನ್ನು ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರವನ್ನು ಪ್ರತ್ಯಾಯೋಜಿಸಿ ಆದೇಶ ಹೊರಡಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!