Sunday, April 18, 2021

Latest Posts

ಇಲಾಖೆ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಬಡವರಿಗೆ ತಲುಪಿಸಿ: ಶೋಭಾ ಮೋಹನ್

ಹೊಸ ದಿಗಂತ ವರದಿ ಮಡಿಕೇರಿ:

ಮಡಿಕೇರಿ ತಾಲೂಕಿನ ಅಂಗನವಾಡಿಗಳಿಗೆ ಕಾಲಮಿತಿಯೊಳಗೆ ಗುಣಮಟ್ಟದ ಆಹಾರ ಪೂರೈಕೆ ಮಾಡಬೇಕು ಎಂದು ತಾಲೂಕು ಪಂಚಾಯತ್ ಅಧ್ಯಕ್ಷೆ ತೆಕ್ಕಡೆ ಶೋಭಾ ಮೋಹನ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ನಗರದ ತಾ.ಪಂ.ಸಭಾಂಗಣದಲ್ಲಿ ನಡೆದ ತಾ.ಪಂ.ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ವಿವಿಧ ಇಲಾಖೆಗಳಲ್ಲಿ ಕಳೆದ ಆರ್ಥಿಕ ವರ್ಷದಲ್ಲಿ ಅನುಷ್ಠಾನಗೊಳಿಸಲಾಗಿರುವ ಕಾರ್ಯಕ್ರಮಗಳ ಮಾಹಿತಿ ಪಡೆದು ಮಾತನಾಡಿದ ಅವರು,ಸಮಾಜ ಕಲ್ಯಾಣ, ಹಿಂದುಳಿದ ವರ್ಗ ಮತ್ತು ಐಟಿಡಿಪಿ ಇಲಾಖೆ ವ್ಯಾಪ್ತಿಯ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಬಡವರಿಗೆ ತಲುಪಿಸಬೇಕು. ಕೋವಿಡ್-19 ಹಿನ್ನೆಲೆಯಲ್ಲಿ ವಿದ್ಯಾರ್ಥಿ ನಿಲಯಗಳ ನಿರ್ವಹಣೆ ವ್ಯವಸ್ಥಿತವಾಗಿರಬೇಕು ಎಂದರು.
ತೋಟಗಾರಿಕಾ ಇಲಾಖೆಯ ಕುರಿತು ಮಾತನಾಡಿ, ಕೃಷಿ ಭೂಮಿಗೆ ಪೈಪ್‍ಲೈನ್ ವ್ಯವಸ್ಥೆ ಮಾಡಬೇಕಿದೆ ಎಂದು ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ ಪ್ರಮೋದ್ ಹೇಳಿದರು.
ಕೃಷಿ ಇಲಾಖೆಯ ಕಾರ್ಯಕ್ರಮಗಳ ಅನುಷ್ಠಾನ ಬಗ್ಗೆ ತಾ.ಪಂ.ಅಧ್ಯಕ್ಷರು ಮಾಹಿತಿ ಪಡೆದರು. ಶಿಕ್ಷಣ ಇಲಾಖೆಯ ಕುರಿತು ಮಾತನಾಡಿ, ಹತ್ತನೇ ತರಗತಿಯವರಿಗೆ ಮಾತ್ರ ತರಗತಿ ನಡೆಯುತ್ತಿದೆ. ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಉತ್ತಮ ಪಡಿಸುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ಆರೋಗ್ಯ ಇಲಾಖೆಯ ಕುರಿತು ಮಾಹಿತಿ ಪಡೆದ ಅಧ್ಯಕ್ಷರು 45 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ಹಾಕಬೇಕು, ಸರ್ಕಾರದ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪ್ರತಿಯೊಬ್ಬರೂ ಪಾಲಿಸಬೇಕು ಎಂದರು.
ಸಭೆಯಲ್ಲಿ ತಾ.ಪಂ.ಉಪಾಧ್ಯಕ್ಷ ಬೊಳಿಯಾಡಿರ ಸಂತು ಸುಬ್ರಮಣಿ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿಯ ಅಧ್ಯಕ್ಷ ಡಿ.ಇ.ಶ್ರೀಧರ ಹಾಗೂ ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಕವಿತಾ, ತಾಲೂಕು ವೈದ್ಯಾಧಿಕಾರಿ ಡಾ.ಚೇತನ್, ಸಿಡಿಪಿಒ ಅರುಂಧತಿ ಅವರು ತಮ್ಮ ಇಲಾಖೆಯ ಕಾರ್ಯ ನಿರ್ವಹಣೆ ಬಗ್ಗೆ ಮಾಹಿತಿ ನೀಡಿದರು

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

spot_imgspot_img

Don't Miss