ಇದು ಗಾನಕೋಗಿಲೆ, ಖ್ಯಾತ ಗಾಯಕಿ ಎಸ್.ಜಾನಕಿಯವರ ತಮಾಷೆ ಮಿಶ್ರಿತ ಬೇಸರದ ನುಡಿ. ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಎಸ್. ಜಾನಕಿಯವರು ಇನ್ನಿಲ್ಲ ಎಂದು ಸುಳ್ಳು ಸುದ್ಧಿ ಹಬ್ಬಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ತೆಲುಗು ಮಾಧ್ಯಮವೊಂದಕ್ಕೆ ಹೀಗೆ ಪ್ರತಿಕ್ರಿಯಿಸಿದ್ದಾರೆ.
‘ಯಾರೋ ಕೆಲಸವಿಲ್ಲದವರು ನನ್ನ ಸಾವಿನ ಬಗ್ಗೆ ಇಂಥ ಗಾಸಿಪ್ ಸುದ್ದಿಗಳನ್ನು ಹರಡುತ್ತಿದ್ದಾರೆ. ಈ ವಿಷಯ ಕೇಳಿದಾಗಿನಿಂದ ನನ್ನ ಅಭಿಮಾನಿಗಳು ಫೋನ್ ಮೇಲೆ ಫೋನ್ ಮಾಡಿ ಆರೋಗ್ಯ ವಿಚಾರಿಸುತ್ತಾ, ಆತಂಕಪಡುತ್ತಿದ್ದಾರೆ. ಅವರನ್ನೆಲ್ಲ ಸಂತೈಸುವ ಹೊತ್ತಿಗೆ ಸಾಕು ಸಾಕಾಯಿತು. ಇದು ಸೇರಿ ಆರನೇ ಬಾರಿ ಗಾಸಿಪ್ ಸುದ್ದಿ ಹಬ್ಬಿಸುವವರು ನನ್ನನ್ನು ಹೀಗೆ ಸಾಯಿಸುತ್ತಿರುವುದು’ ಎಂದು ಹೇಳಿದ್ದಾರೆ.
ಇಂಥ ಗಾಳಿಸುದ್ದಿಗಳನ್ನು ಕೇಳಿದಾಗ, ಆ ಸುದ್ದಿಯ ಸತ್ಯಾಸತ್ಯತೆಯನ್ನು ಪರಿಶೀಲಿಸಿ, ನಂತರ ಹಂಚಿಕೊಳ್ಳಿ ಎಂದು ಕಿವಿಮಾತು ಹೇಳಿದ್ದಾರೆ. ಕಳೆದ ಭಾನುವಾರದಂದು ‘ಖ್ಯಾತ ಗಾಯಕಿ ಎಸ್.ಜಾನಕಿ ಇನ್ನಿಲ್ಲ’ ಎಂಬ ಸುಳ್ಳು ಸುದ್ದಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಇದರಿಂದ ಅವರ ಅಭಿಮಾನಿಗಳು ಆತಂಕಕ್ಕೆ ಒಳಗಾಗಿದ್ದರು.