Wednesday, August 10, 2022

Latest Posts

ಇಳಿಕೆಯತ್ತ ಕೊರೋನಾ ಸೋಂಕು| ದೇಶದಲ್ಲಿ ಸಕ್ರಿಯ ಸೋಂಕಿತ ಪ್ರಕರಣಗಳೆಷ್ಟು ಗೊತ್ತಾ?

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 45,903 ಹೊಸ ಕೊರೋನಾ ಸೋಂಕಿತ ಪ್ರಕರಣಗಳು ವರದಿಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ವರದಿ ತಿಳಿಸಿದೆ.

ಭಾರತದಲ್ಲಿ ಈವರೆಗೂ 5,09,673 ಮಂದಿ ಸಕ್ರಿಯ ಸೋಂಕಿತರಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದೇಶದಲ್ಲಿ ಒಟ್ಟು 85,53,657 ಕೊರೋನಾ ಪ್ರಕರಣಗಳು ದಾಖಲಾಗಿದೆ. ಸೋಂಕಿತರಲ್ಲಿ ಒಟ್ಟು 79,17,373 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ದೇಶದಲ್ಲಿ 1,26,611 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ.

ಮಹಾರಾಷ್ಟ್ರದಲ್ಲಿ 97,296 ಸಕ್ರಿಯ ಸೋಂಕಿತರಿದ್ದು, ಕರ್ನಾಟಕದಲ್ಲಿ 33,697 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು, 8,01,799 ಮಂದಿ ಗುಣಮುಖರಾಗಿದ್ದಾರೆ.

ದೇಶದ ಒಟ್ಟು ಕೊರೋನಾ ಸೋಂಕಿತರಲ್ಲಿ ಶೇ.5.95 ಮಂದಿ ಸಕ್ರಿಯ ಸೋಂಕಿತರಿದ್ದು, ಶೇ.92.56 ಮಂದಿ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಇಲಾಖೆ ವರದಿ ತಿಳಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss