Saturday, July 2, 2022

Latest Posts

ಇಳಿಮುಖದತ್ತ ದಕ್ಷಿಣ ಕನ್ನಡ ಜಿಲ್ಲೆಯ ಕೊರೋನಾ ಸೋಂಕಿನ ಪ್ರಮಾಣ: ಇಂದು 28 ಮಂದಿಗೆ ಪಾಸಿಟಿವ್

ಹೊಸ ದಿಗಂತ ವರದಿ, ಮಂಗಳೂರು:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಮತ್ತಷ್ಟು ಇಳಿಮುಖದತ್ತ ಸಾಗುತ್ತಿದ್ದು, ಸೋಮವಾರ 28 ಮಂದಿಗೆ ಸೋಂಕು ದೃಢಪಟ್ಟಿದೆ.
53 ಮಂದಿ ಗುಣಮುಖರಾಗಿದ್ದಾರೆ. ನಾಲ್ವರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಈಗ ಒಟ್ಟು ಸೋಂಕಿತರ ಸಂಖ್ಯೆ 31594ಕ್ಕೆ ಏರಿಕೆಯಾಗಿದೆ. ಈ ಪೈಕಿ 550 ಮಾತ್ರ ಸಕ್ರಿಯ ಪ್ರಕರಣಗಳು. 30336 ಮಂದಿ ಗುಣಮುಖರಾಗಿದ್ದಾರೆ. 708 ಮಂದಿ ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ 13984 ಮಾಸ್ಕ್ ಉಲ್ಲಂಘನೆ ಪ್ರಕರಣ ವರದಿಯಾಗಿದ್ದು, 1511242 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ದ.ಕ. ಜಿಲ್ಲಾಡಳಿತ ತಿಳಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss