Wednesday, August 10, 2022

Latest Posts

ಇಳಿಯುತ್ತಿದೆ ಕೊರೋನಾ ಸೋಂಕಿತರ ಸಂಖ್ಯೆ: ನಿನ್ನೆ ದಾಖಲಾದ ಪ್ರಕರಣಗಳೆಷ್ಟು?

ಹೊಸದಿಗಂತ ಆನ್‌ಲೈನ್ ಡೆಸ್ಕ್:

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 15,590 ಮಂದಿಗೆ ಕೊರೋನಾ ಸೋಂಕು ಕಾಣಿಸಿದೆ.
ಒಟ್ಟಾರೆ ಸೋಂಕಿತರ ಸಂಖ್ಯೆ 1,05,27,683 ಕ್ಕೇರಿದೆ. ಕಳೆದ 24 ಗಂಟೆಯಲ್ಲಿ 191 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,51,918ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 2,13,027 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,01,62,738 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 15,975ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss