ಹೊಸದಿಲ್ಲಿ: ಈಶಾನ್ಯ ದಿಲ್ಲಿಯಲ್ಲಿ ಕಳೆದ ಕೆಲ ದಿನ ಗಳಿಂದ ಭುಗಿಲೆದ್ದಿರುವ ಹಿಂಸಾಚಾರಕ್ಕೆ ಪ್ರಾಣ ಕಳೆದು ಕೊಂಡವರ ಸಂಖ್ಯೆ ಶುಕ್ರವಾರ 43ಕ್ಕೆ ಏರಿಕೆಯಾಗಿದೆ. ಇನ್ನು ಹಿಂಸಾಚಾರ ಸಂಬಂಧ ೧೨೩ ದೂರುಗಳು ದಾಖಲಾಗಿ ದ್ದು, ೬೩೦ ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಗಲಭೆ ಪೀಡಿತ ಪ್ರದೇಶದಲ್ಲಿ ಇನ್ನೂ ಬೂದಿ ಮುಚ್ಚಿದ ಕೆಂಡದಂತಹ ವಾತಾವರಣವಿದ್ದು, ಕೆಲ ಭಾಗಗಳಲ್ಲಿ ಪರಿಸ್ಥಿತಿ ಸಹಜ ಸ್ಥಿತಿಯತ್ತ ಮರಳುತ್ತಿದೆ.
ವ್ಯಾಪಕ ಬಂದೋಬಸ್ತ್
ಜಫ್ರಾಬಾದ್, ಮಜ್ಪುರ್, ಚಾಂದ್ ಭಾಗ್, ಖುರೇಜಿ ಖಾಸ್ ಮತ್ತು ಭಜನ್ ಪುರ ಪ್ರದೇಶಗಳಲ್ಲಿ ಯಾವುದೇ ಅಹಿತಕರ ಘಟನೆಗಳು ಮರು ಕಳಿಸದಂತೆ ವ್ಯಾಪಕ ಬಂದೋಬಸ್ತ್ ಮಾಡಲಾಗಿದೆ. ಗಲಭೆ ಪೀಡಿತ ಪ್ರದೇಶದಲ್ಲಿ ಕಾನೂನು-ಸುವ್ಯವಸ್ಥೆ ಗಾಗಿ ಸೋಮವಾರದಿಂದ ಸುಮಾರು 7,000 ಅರೆಸೇನಾ ಪಡೆಗಳನ್ನು ನಿಯೋಜಿಸಲಾಗಿದೆ. ಶಾಂತಿ ಕಾಪಾಡುವ ಸಲುವಾಗಿ ಘಟನಾ ಸ್ಥಳದಲ್ಲಿ ನೂರಾರು ಪೊಲೀಸರು ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧ ಮತ್ತು ಪರ ಭುಗಿಲೆದ್ದ ಪ್ರತಿಭಟನೆ ಮತ್ತು ವ್ಯಾಪಕ ಹಿಂಸಾಚಾರದಲ್ಲಿ ಪೊಲೀಸರು ಸೇರಿದಂತೆ 250ಕ್ಕೂ ಹೆಚ್ಚು ಮಂದಿ ಗಾಯ ಗೊಂಡಿದ್ದು, ಕೆಲವರ ಸ್ಥಿತಿ ಶೋಚನೀಯವಾಗಿದೆ. ಹಿಂಸಾಚಾರದಲ್ಲಿ ಮೃತಪಟ್ಟವರಲ್ಲಿ ಪೊಲೀಸ್ ಹೆಡ್ ಕಾನ್ಸ್ಟೇಬಲ್ ರತನ್ಸಿಂಗ್, ಗುಪ್ತಚರ ಇಲಾಖೆಯ ಅಧಿಕಾರಿ ಅಂಕಿತ್ ಶರ್ಮ ಕೂಡ ಸೇರಿzರೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.