Saturday, January 23, 2021

Latest Posts

ಈ ಬಾರಿ ಮಂಗಳೂರು ದಸರಾ ಮಹೋತ್ಸವಕ್ಕೆ ಕೋವಿಡ್ ವಾರಿಯರ್ ಡಾ.ಆರತಿಕೃಷ್ಣ ಚಾಲನೆ

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ಅ.17 ಆರಂಭವಾಗಲಿರುವ ಮಂಗಳೂರು ದಸರಾ ಮಹೋತ್ಸವಕ್ಕೆ ಕೋವಿಡ್ ವಾರಿಯರ್, ಎನ್‌ಆರ್‌ಐ ಫೋರಂ ಮಾಜಿ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ ಚಾಲನೆ ನೀಡಲಿದ್ದಾರೆ.
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅಭಿವೃದ್ಧಿಯ ರೂವಾರಿ ಜನಾರ್ದನ ಪೂಜಾರಿ ಅವರ ಆಶಯದಂತೆ ಮಂಗಳೂರು ದಸರಾ ಮಹೋತ್ಸವವು ‘ನಮ್ಮ ದಸರಾ-ನಮ್ಮ ಸುರಕ್ಷೆ’ ಘೋಷವಾಕ್ಯದಡಿ ನಡೆಯಲಿದೆ. ಈ ಹಿನ್ನಲೆಯಲ್ಲಿ ಕೋವಿಡ್-19ವಾರಿಯರ್ ಆಗಿ ಅವಿರತ ಶ್ರಮಿಸಿದ ಡಾ. ಆರತಿಕೃಷ್ಣ ಅವರನ್ನು ಮಂಗಳೂರು ದಸರಾ ಮಹೋತ್ಸದ ಚಾಲನೆಗೆ ಆಮಂತ್ರಿಸಲಾಗಿದೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.
ಶನಿವಾರದ ಕಾರ್ಯಕ್ರಮ: ಅ.17ರ ಶನಿವಾರ ಬೆಳಗ್ಗೆ 9.30ಕ್ಕೆ ಗುರುಪ್ರಾರ್ಥನೆ, 11.30ಕ್ಕೆ ಕಲಶ ಪ್ರತಿಷ್ಠೆ, 12.00 ದಸರಾಕ್ಕೆ ಚಾಲನೆ, 12.30ಕ್ಕೆ ನವದುರ್ಗೆಯರ ಮತ್ತು ಶಾರದಾ ಪ್ರತಿಷ್ಠೆ, 12.30ಕ್ಕೆ ಪುಷ್ಪಾಲಂಕಾರ ಮಹಾಪೂಜೆ, ಸಂಜೆ 7.00ರಿಂದ ಭಜನಾ ಕಾರ್ಯಕ್ರಮ, 9.00ರಿಂದ ದೇವಿ ಪುಷ್ಪಾಲಂಕಾರ ಪೂಜೆ ನಡೆಯಲಿದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

Don't Miss

error: Content is protected !!