Sunday, June 26, 2022

Latest Posts

ಈ ಬಿಎಸ್ಸಿ ವಿದ್ಯಾರ್ಥಿನಿ ಬರೆಯಲಿದ್ದಾರೆ ‘ಕೇರಳದ ಅತೀ ಕಿರಿಯ ಮೇಯರ್’ ಎಂಬ ದಾಖಲೆ!

ಹೊಸದಿಗಂತ ಆನ್‌ಲೈನ್ ಡೆಸ್ಕ್:

ತಿರುವನಂತಪುರದ ಮುಂದಿನ ಮೇಯರ್ ಆಗಿ ಅಧಿಕಾರ ಸ್ವೀಕರಿಸುವ ಮೂಲಕ ರಾಜ್ಯದ ಅತ್ಯಂತ ಕಿರಿಯ ಮೇಯರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ ಆರ್ಯ ರಾಜೇಂದ್ರನ್!
೨೧ ವರ್ಷದ ಈ ಹುಡುಗಿ ತಿರುವನಂತಪುರಂನಲ್ಲಿರುವ ಆಲ್ ಸೇಂಟ್ಸ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿಎಸ್ಸಿ ವಿದ್ಯಾರ್ಥಿನಿಯಾಗಿದ್ದಾರೆ. ಚುನಾವಣೆಯಲ್ಲಿ ಸಿಪಿಎಂ ಅಭ್ಯರ್ಥಿಯಾಗಿರುವ  ಆರ್ಯ, ಮುದವನ್ಮುಗಲ್ ವಾರ್ಡ್‌ನಿಂದ ಯುಡಿಎಫ್ ಅಭ್ಯರ್ಥಿ ಶ್ರೀಕಾಲ ಅವರ ವಿರುದ್ಧ ೨೮೭೨ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.  ನಂತರದ ಬೆಳವಣಿಗೆಗಳಲ್ಲಿ ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಆರ್ಯ ಅವರನ್ನು ಭೇಟಿ ಮಾಡಿದ್ದಾರೆ. ಮೇಯರ್ ಹುದ್ದೆಗೆ ಯುವ ಸಮುದಾಯವನ್ನು ಪರಿಗಣಿಸಲು ನಿರ್ಧರಿಸಿದ್ದರಿಂದ ಈಕೆಯ ಹೆಸರನ್ನು ಅಂತಿಮಗೊಳಿಸಿದೆ ಎನ್ನಲಾಗಿದೆ. ಆದರೆ ಪಕ್ಷದಿಂದ ಈವರೆಗೆ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ. ಆದರೆ ಪಕ್ಷ ನನಗೆ ನೀಡುವ ಯಾವುದೇ ಜವಾಬ್ದಾರಿಯನ್ನು ಸಂತೋಷದಿಂದ ಸ್ವೀಕರಿಸುತ್ತೇನೆ ಎಂದು ಆರ್ಯ ಹೇಳಿದ್ದಾರೆ.
ನ್ನೊಂದು ವಿಶೇಷವೆಂದರೆ, ಆರ್ಯ ಯಾವುದೇ ರಾಜಕೀಯ ಕುಟುಂಬದ ಹಿನ್ನೆಲೆ ಹೊಂದಿಲ್ಲ. ತಂದೆ ರಾಜೇಂದ್ರನ್ ಎಲೆಕ್ಟ್ರಿಷಿಯನ್ ಆಗಿದ್ದರೆ, ತಾಯಿ ಶ್ರೀಲತಾ ಎಲ್‌ಐಸಿ ಏಜೆಂಟ್ ಆಗಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss