ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ಈ ವರ್ಷ ಮೈಸೂರು ದಸರಾವನ್ನು ಬಹಳ ಸರಳವಾಗಿ ಆಚರಣೆ ಮಾಡುವುದಾಗಿ ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ತಿಳಿಸಿದ್ದಾರೆ.
ಈ ಬಗ್ಗೆ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಕೊರೋನಾ ಹಿನ್ನೆಲೆಯಲ್ಲಿ ಮೈಸೂರು ದಸರಾವನ್ನು ಬಹಳ ಸರಳವಾಗಿ, ಸಂಪ್ರದಾಯಬದ್ಧವಾಗಿ ಆಚರಣೆ ಮಡಲು ತೀರ್ಮಾನಿಸಿದ್ದೇವೆ ಎಂದರು.
ಈ ಕುರಿತಂತೆ ಸಿ.ಎಂ ಬಿ.ಎಸ್ ಯಡಿಯೂರಪ್ಪ ಅವರೊಮದಿಗೆ ನೇರವಾಗಿ ಚರ್ಚಿಸಿ ನಂತರ ಮೈಸೂರಿನ ಚಿಲ್ಲಾಡಳಿತದ ಜತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.