spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, September 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಉಕ್ಕಿ ಹರಿಯುತ್ತಿರುವ ಲಕ್ಷ್ಮಣ ತೀರ್ಥ ನದಿ: ಜಮೀನುಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಬೆಳೆ ನಷ್ಟ

- Advertisement -Nitte

ಮೈಸೂರು: ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಮೈಸೂರು ಜಿಲ್ಲೆಯ ಹುಣಸೂರಿನ ಲಕ್ಷ್ಮಣ ತೀರ್ಥ ನದಿ ಉಕ್ಕಿ ಹರಿಯುತ್ತಿದ್ದು ರೈತರಿಗೆ ಸಂಕಷ್ಟ ಎದುರಾಗಿದೆ.
ಲಕ್ಷ್ಮಣ ತೀರ್ಥ ನದಿ ಉಕ್ಕಿ ಹರಿಯುತ್ತಿರುವ ಪರಿಣಾಮ ಜಮೀನುಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಬೆಳೆ ನಷ್ಟವಾಗಿದೆ. ಅಲ್ಪ ಸ್ವಲ್ಪ ಬೆಳೆ ಪಡೆಯಲು ಜನ ನೀರಿಗಿಳಿದು ಶುಂಠಿ ಬೇಳೆ ಕಟಾವು ಮಾಡುತ್ತಿದ್ದಾರೆ. ಮತ್ತೊಂದೆಡೆ ಕೊಪ್ಪರಿಗೆಗಳನ್ನು ಬಳಸಿ ಮುಸುಕಿನ ಜೋಳವನ್ನ ರೈತರು ಸಂಗ್ರಹಿಸುತ್ತಿದ್ದಾರೆ.
ಭಾರಿ ಮಳೆ ಲಕ್ಷ್ಮಣ ತೀರ್ಥ ನದಿಯಲ್ಲಿ ಪ್ರವಾಹದಿಂದಾಗಿ ಹುಣಸೂರು ತಾಲೂಕು ಹನಗೋಡು, ಶಿಂಡೇನಹಳ್ಳಿ ವ್ಯಾಪ್ತಿಯಲ್ಲಿ ರೈತರ ಸಂಕಷ್ಟ ಎದುರಾಗಿದ್ದು ಶುಂಠಿ ಹಾಗೂ ಮೆಕ್ಕೆಜೋಳ ಬೆಳೆಗಳು ನಾಶವಾಗಿವೆ. ಕಳೆದ ವರ್ಷವೂ ಈ ಭಾಗದ ನೆರೆಗೆ ತುತ್ತಾಗಿ ಅಪಾರ ನಷ್ಟ ಹೊಂದಿತ್ತು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss