Thursday, August 11, 2022

Latest Posts

ಉಗ್ರರು ಸಿಕ್ಕಿಬಿದ್ದ ಮಾತ್ರಕ್ಕೆ ಬೆಂಗಳೂರು ಅವರದ್ದಲ್ಲ, ಈ ಊರು ನಮ್ಮದು: ಎಚ್‌ಡಿಕೆ

ಬೆಂಗಳೂರು: ಉಗ್ರರು ಇಲ್ಲಿ ಸಿಕ್ಕಬಿದ್ದ ಮಾತ್ರಕ್ಕೆ ಬೆಂಗಳೂರು ಅವರದಲ್ಲ, ಬೆಂಗಳೂರು ನಮ್ಮದು ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೆಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿದ್ದು, ಬೆಂಗಲೂರು ಉಗ್ರರ ಕೇಂದ್ರವಾಗಿದೆ ಎಂದು ಬಿಜೆಪಿಯೊಳಗಿನ ಕೆಲ ಅಪ್ರಬುದ್ಧರು ಹೇಳಿರುವುದು ಅಪಮಾನಕರ. ಇದನ್ನು ಸಮರ್ಥಿಸಲಾಗದೆ ಮುಖ್ಯಮಂತ್ರಿಗಳು ಕಷ್ಟ ಪಟ್ಟಿದ್ದಾರೆ. ಉಗ್ರರೊಂದಿಗೆ ಸಂಪರ್ಕ ಹೊಂದಿರುವ ಕೆಲ ಮಂದಿ ಡಿಜೆ ಹಳ್ಳಿ ಘಟನೆ ನಂತರ ಸಿಕ್ಕಿ ಬಿದ್ದಿದ್ದರು. ಹೀಗಾಗಿ ನಮ್ಮ ಟೀಕೆ ಉಗ್ರರ ವಿರುದ್ಧ ಇರಬೇಕು. ಆದರೆ ಕೋಟ್ಯಂತರ ಜನರಿಗೆ ಅನ್ನ, ಆಶ್ರಯ ಜೀವನ ನೀಡುತ್ತಿರುವ ತಾಯಿಯಂಥ ಊರಿನ ಬಗ್ಗೆ ಅಲ್ಲ. ಬೆಂಗಳೂರಿನಲ್ಲಿ ಉಗ್ರರು ಸಿಕ್ಕಿಬಿದ್ದ ಮಾತ್ರಕ್ಕೆ ಬೆಂಗಳೂರು ಅವರದಲ್ಲ. ಬೆಂಗಳೂರು ನಮ್ಮದು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss