Sunday, August 14, 2022

Latest Posts

ಉಡುಪಿ|ಕೊರೋನಾ ರೋಗ ಲಕ್ಷಣಗಳು ಕಂಡುಬಂದರೆ ಮಾತ್ರ ಕೋವಿಡ್ ಪರೀಕ್ಷೆ

ಉಡುಪಿ: ಸರಕಾರಗಳು ಕೋವಿಡ್ ಪರೀಕ್ಷೆ ನಡೆಸುವುದಕ್ಕೆ ಪರಿಷ್ಕೃತ ಮಾರ್ಗಸೂಚಿ ನೀಡಿದ್ದು, ಪ್ರಸ್ತುತ ವ್ಯಕ್ತಿಯಲ್ಲಿ ರೋಗ ಲಕ್ಷಣಗಳು ಕಾಣಿಸಿಕೊಂಡರೆ ಮಾತ್ರ ಕೋವಿಡ್ ಪರೀಕ್ಷೆಗೊಳಪಡಿಸಬೇಕಾಗಿದೆ. ಉಡುಪಿ ಜಿಲ್ಲೆಯಲ್ಲಿ ಈವರೆಗೆ 900ಕ್ಕೂ ಅಕ ತೀವ್ರ ಉಸಿರಾಟದ ಸಮಸ್ಯೆ ಮತ್ತು ಶೀತಜ್ವರ ಇರುವವರನ್ನು ಪರೀಕ್ಷೆಗೊಳಪಡಿಸಲಾಗಿದೆ.

ಶೀತ, ಜ್ವರ, ಗಂಟಲು ನೋವು, ತೀವ್ರ ಉಸಿರಾಟದ ತೊಂದರೆ, ನ್ಯುಮೋನಿಯಾ ಮೊದಲಾದ ಲಕ್ಷಣಗಳು ಗೋಚರಿಸಿದರೆ ಅಂತಹವರನ್ನು ಪರೀಕ್ಷೆಗೊಳಪಡಿಸಿ, ಚಿಕಿತ್ಸೆ ನೀಡಬೇಕಾಗಿದೆ. ಕಳೆದ ಹಲವು ದಿನಗಳಿಂದ ಉಡುಪಿ ಜಿಲ್ಲೆಯಲ್ಲಿ ಅಂತಹವರ ಗಂಟಲ ದ್ರವ ಮಾದರಿಗಳನ್ನು ಮಾತ್ರ ಕೋವಿಡ್ ಪರೀಕ್ಷೆಗಾಗಿ ಪ್ರಯೋಗಾಲಕ್ಕೆ ಕಳುಹಿಸಿ ಕೊಡಲಾಗುತ್ತಿದೆ.

ಉಡುಪಿ ಜಿಲ್ಲೆಯಲ್ಲಿ ಬುಧವಾರದ ವರೆಗೆ 395 ಮಂದಿ ತೀವ್ರ ಉಸಿರಾಟದ ಸಮಸ್ಯೆ ಇರುವವರನ್ನು ಪರೀಕ್ಷೆಗೊಳಪಡಿಸಲಾಗಿದೆ. ಇವರಲ್ಲಿ ಇಬ್ಬರಿಗೆ ನೋವೆಲ್ ಕೊರೋನಾ ವೈರಸ್ ಸೋಂಕು ಕಾಣಿಸಿಕೊಂಡಿದೆ. ವಿವಿಧ ಜ್ವರದ ಕ್ಲಿನಿಕ್‌ಗಳು ಹಾಗೂ ಆಸ್ಪತ್ರೆಗಳಿಗೆ ಆಗಮಿಸಿದ 519 ಶೀತಜ್ವರವಿರುವವರ ಗಂಟಲ ದ್ರವದ ಮಾದರಿ ಕಳುಹಿಸಲಾಗಿದೆ. ಈ ಪೈಕಿ ಒಬ್ಬರಿಗೆ ಸೋಂಕು ತಗುಲಿರುವುದು ಪತ್ತೆಯಾಗಿದೆ. ಒಟ್ಟು 914 ಜನರನ್ನು ಪರೀಕ್ಷೆಗೊಳಪಡಿಸಿದ್ದು, ಮೂವರು ಸೋಂಕಿತರು ಕಂಡುಬಂದಿದ್ದಾರೆ. ಇನ್ನೂ ಕೆಲವರ ವರದಿ ಬರುವುದಕ್ಕೆ ಬಾಕಿ ಇದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss