spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, September 19, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಉಡುಪಿಯನ್ನು ನಶಾ ಮುಕ್ತ ಜಿಲ್ಲೆಯನ್ನಾಗಿಸಲು ಅಗತ್ಯ ಯೋಜನೆಗಳ ಸಿದ್ಧಪಡಿಸಲು ಜಿಲ್ಲಾಧಿಕಾರಿ ಸೂಚನೆ

- Advertisement -Nitte

ಉಡುಪಿ: ಜಿಲ್ಲೆಯಲ್ಲಿ ಮಾದಕ ವಸ್ತುಗಳ ಸರಬರಾಜು, ಬಳಕೆಯನ್ನು ಸಂಪೂರ್ಣವಾಗಿ ನಿಗ್ರಹಿಸಿ, ಉಡುಪಿಯನ್ನು ನಶಾ ಮುಕ್ತ ಉಡುಪಿ ಜಿಲ್ಲೆಯನ್ನಾಗಿ ರೂಪಿಸಲು ಅಗತ್ಯವಿರುವ ಯೋಜನೆಗಳನ್ನು ಸಿದ್ಧಪಡಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ ಸೂಚಿಸಿದ್ದಾರೆ.
ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ, ನಶಾ ಮುಕ್ತ ಭಾರತ್ ಅಭಿಯಾನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕೇಂದ್ರ ಸರಕಾರದ ಸೂಚನೆಯಂತೆ ಜಿಲ್ಲೆಯಲ್ಲಿ ನಶಾ ಮುಕ್ತ ಭಾರತ ಶಿಬಿರ ಆಯೋಜಿಸಬೇಕಿದೆ. ಈ ನಿಟ್ಟಿನಲ್ಲಿ ಎಲ್ಲ ಅಧಿಕಾರಿಗಳು ಕಾರ್ಯೊನ್ಮುರಾಗುವಂತೆ ಜಿಲ್ಲಾಧಿಕಾರಿ ತಿಳಿಸಿದರು.
ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತಂತೆ ಹೆಚ್ಚು ಅರಿವು ಕಾರ್ಯಕ್ರಮಗಳನ್ನು ಆಯೋಜಿಸಿ, ಪ್ರತಿ ಶಾಲಾ ಕಾಲೇಜುಗಳಲ್ಲಿ ಪ್ರತ್ಯೇಕ ಕ್ಲಬ್‌ಗಳನ್ನು ರಚಿಸಬೇಕು. ಅವುಗಳ ಮೂಲಕ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು. ಯಾವುದೇ ಶಾಲೆ ಅಥವಾ ಕಾಲೇಜಿನ ಕ್ಯಾಂಪಸ್‌ಗಳಲ್ಲಿ ಮಾದಕ ವಸ್ತುಗಳ ಬಳಕೆ ಪ್ರಕರಣ ಕಂಡುಬಂದಲ್ಲಿ ಆ ಸಂಸ್ಥೆಯ ಮುಖ್ಯಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಜಿಲ್ಲಾಧಿಕಾರಿ ಜಿ. ಜಗದೀಶ ಸೂಚನೆ ನೀಡಿದರು.
ಮಾದಕ ವಸ್ತುಗಳ ಬಳಕೆ ನಡೆಯುತ್ತಿರುವ, ಸರಬರಾಜು ಬಗ್ಗೆ ಮತ್ತು ಮಾದಕ ವ್ಯಸನಿಗಳ ಕುರಿತು ಮಾಹಿತಿ ನೀಡಲು ಪ್ರತ್ಯೇಕ ದೂರವಾಣಿ ಸಂಖ್ಯೆಯನ್ನು ಸ್ಥಾಪಿಸಬೇಕು. ಅದನ್ನು ಸಾರ್ವಜನಿಕರಿಗೆ ನೀಡಿ, ಪ್ರತ್ಯೇಕ ಫೇಸ್‌ಬುಕ್ ಪೇಜ್ ರಚಿಸಿ, ಮಾದಕ ವಸ್ತುಗಳ ಬಳಕೆಯ ಅಪಾಯ, ಇದರ ನಿಯಂತ್ರಣ ಕುರಿತು ಜಿಲ್ಲೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಗಳ ಪ್ರಗತಿ ವರದಿಯನ್ನು ಅದರಲ್ಲಿ ಅಪ್‌ಲೋಡ್ ಮಾಡಲು ಜಿಲ್ಲಾಧಿಕಾರಿ ನಿರ್ದೇಶನ ಮಾಡಿದರು.
ಜಿಲ್ಲೆಯಲ್ಲಿನ ಸ್ವಯಂ ಸೇವಾ ಸಂಸ್ಥೆಗಳ ಸಹಕಾರ ಪಡೆದು, ಸ್ವಯಂ ಸೇವಕರನ್ನು ನೇಮಿಸಿಕೊಂಡು ಅವರ ಮೂಲಕ ಜನರಲ್ಲಿ ಜಾಗೃತಿ ಮೂಡಿಸಬೇಕು. ಸ್ವಯಂ ಸೇವಕರಿಗೆ ಗುರುತಿನ ಚೀಟಿ ನೀಡಿ, ತಾಲೂಕು ಮಟ್ಟದಲ್ಲಿಯೂ ಸಹ ಸಮಿತಿ ರಚಿಸಿಕೊಂಡು ಕಾರ್ಯ ನಿರ್ವಹಿಸಿ, ಜಿಲ್ಲೆಯಲ್ಲಿನ ಡಿ-ಅಡಿಕ್ಷನ್ ಸೆಂಟರ್ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಪರಿಶೀಲಿಸಿ, ವ್ಯಸನಿಗಳಿಗೆ ಕೌನ್ಸಿಲಿಂಗ್ ನೀಡಲು ವ್ಯವಸ್ಥೆ ಮಾಡಿ ಎಂದು ಡಿಸಿ ಜಿ.ಜಗದೀಶ ಹೇಳಿದರು.
ಜಿಲ್ಲೆಯೊಳಗೆ ಮಾದಕ ವಸ್ತುಗಳ ಸರಬರಾಜು ತಡೆಯುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯಿಂದ ಹೆಚ್ಚಿನ ಪರಿಶೀಲನೆ, ಅನಿರೀಕ್ಷಿತ ದಾಳಿಗಳನ್ನು ನಡೆಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.
ಸಭೆಯಲ್ಲಿ ಎಸ್ಪಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಡಿಡಿಪಿಐ ಶೇಷಶಯನ ಕಾರಿಂಜ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss