ಉಡುಪಿ: ಜಿಲ್ಲೆಯಲ್ಲಿ ಕೋವಿಡ್ -19 ಸೋಂಕು ನಿಯಂತ್ರಣಕ್ಕಾಗಿ ಸದ್ಯಕ್ಕೆ ಲಾಕ್ ಡೌನ್ ಅಗತ್ಯವಿಲ್ಲ. ಜಿಲ್ಲೆಯ ಒಳಗಡೆ ಪರಿಸ್ಥಿತಿಯನ್ನು ನಿಯಂತ್ರಿಸುವುದು ಕಷ್ಟವಲ್ಲ ಎಂದು ಉಡುಪಿ ಶಾಸಕ ಕೆ. ರಘುಪತಿ ಭಟ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನಜೀವನ ಈಗಷ್ಟೇ ಚೇತರಿಸಿಕೊಳ್ಳುತ್ತಿದೆ. ಮತ್ತೆ ಲಾಕ್ ಡೌನ್ ಮಾಡಿದರೆ ಆರ್ಥಿಕತೆಯ ಮೇಲೆ ಭಾರಿ ಹೊಡೆತ ಬೀಳಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಉಡುಪಿ ಜಿಲ್ಲೆಗೆ ಹೊರ ಜಿಲ್ಲೆಯಿಂದ ಬರುತ್ತಿರುವ ಕೋವಿಡ್ ಸೋಂಕಿತರೇ ಬಹಳ ದೊಡ್ಡ ಸವಾಲಾಗಿದ್ದಾರೆ. ಅದಕ್ಕಾಗಿ ಜಿಲ್ಲೆಯ ಗಡಿ ಭಾಗಗಳನ್ನು ಮತ್ತೆ ಸೀಲ್ ಡೌನ್ ಮಾಡಲು ಜಿಲ್ಲಾಧಿಕಾರಿ ಅವರಿಗೆ ಸಲಹೆ ನೀಡಿದ್ದೇನೆ. ಹೊರ ಜಿಲ್ಲೆಯಿಂದ ಬರುತ್ತಿರುವವರನ್ನು ಗೃಹ ದಿಗ್ಬಂಧನಕ್ಕೊಳಪಡಿಸಬೇಕು ಆಗ ಸೋಂಕು ಹರಡುವುದು ನಿಯಂತ್ರಣಕ್ಕೆ ಬರುತ್ತದೆ ಎಂದು ಶಾಸಕರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.