ಉಡುಪಿಯ TMA Pai ಆಸ್ಪತ್ರೆ ಹಾಗೂ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗಳ ಒಪಿಡಿ ಸೇವೆ ಇಲ್ಲ!

0
34

ಉಡುಪಿ: ಕೊರೋನಾ ಸೋಂಕು ಹರಡದಂತೆ ತಡಗಟ್ಟಲು ಟಿ.ಎಂ.ಎ. ಪೈ ಆಸ್ಪತ್ರೆ ಮತ್ತು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ(KMC)ಗಳು ಮಾ. 27ರಿಂದ ಏ.15ರವರೆಗೆ ತನ್ನ ಒಪಿಡಿ ಸೇವೆಗಳನ್ನು ರದ್ದುಗೊಳಿಸಲಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರು ತಿಳಿಸಿದ್ದಾರೆ.

ಮಣಿಪಾಲದ ಕೆ.ಎಂ.ಸಿ ಆಸ್ಪತ್ರೆಯಲ್ಲಿ ಅಪಘಾತ ಹಾಗೂ ತುರ್ತು ವೈದ್ಯಕೀಯ ಚಿಕಿತ್ಸೆಗಳು ಲಭ್ಯವಿರುತ್ತದೆ. ಕೆಮ್ಮು, ನೆಗಡಿ, ಜ್ವರ ಹಾಗೂ ಇನ್ನಿತರೆ ರೋಗ್ಯದ ಸಮಸ್ಯೆಗಳಿಗೆ ರೋಗಿಗಳು ಆಸ್ಪತ್ರೆಯ ಹೊರಾಂಗಣದಲ್ಲಿ ಇರುವ ತಾತ್ಕಾಲಿಕ ತಪಾಸಣ ಕೇಂದ್ರದಲ್ಲಿ ಪರೀಕ್ಷೆ ಮಾಡಿಸಬೇಕು.

ಮಾ.27ರಿಂದ ಉಡುಪಿಯ ಟಿ.ಎಂ.ಎ ಪೈ ಆಸ್ಪತ್ರೆಯಲ್ಲಿ ಎಲ್ಲಾ ಒಪಿಡಿ, ಒಳರೋಗಿ ಮತ್ತು ತುರ್ತುಸೇವೆ ವಿಭಾಗವನ್ನು ಮುಚ್ಚಲಾಗುವುದು. ತುರ್ತುಸೇವೆಗಾಗಿ ಟಿಎಂಎ ಪೈ ಆಸ್ಪತ್ರೆಯ ಎಲ್ಲಾ ರೋಗಿಗಳು  ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ತೆರಳುವಂತೆ ಕೋರಿದೆ.

LEAVE A REPLY

Please enter your comment!
Please enter your name here