ಉಡುಪಿ| ಆತ್ಮನಿರ್ಭರ ಭಾರತ್ ಯೋಜನೆಯಡಿ ಮೇ, ಜೂನ್ ತಿಂಗಳಲ್ಲಿ ಉಚಿತ ಆಹಾರಧಾನ್ಯ: ಜಿಲ್ಲಾಧಿಕಾರಿ ಜಿ.ಜಗದೀಶ

0
151

ಉಡುಪಿ: ಜಿಲ್ಲೆಯಲ್ಲಿ ಹೊಟೇಲ್, ಕಾರ್ಖಾನೆ, ಕಟ್ಟಡ ಕಾರ್ಮಿಕರು ಹಾಗೂ ಇನ್ನಿತರ ಯಾವುದೇ ಸಂಸ್ಥೆ ಕಚೇರಿಗಳಲ್ಲಿ ಕೆಲಸ ಮಾಡುತ್ತಿರುವ ವಲಸೆ ಕಾರ್ಮಿಕರಿಗೆ , ಕೇಂದ್ರ ಸರಕಾರದ ಆತ್ಮನಿರ್ಭರ ಭಾರತ್ ಯೋಜನೆ ಅಡಿಯಲ್ಲಿ ಮೇ ಮತ್ತು ಜೂನ್ ತಿಂಗಳಲ್ಲಿ ಉಚಿತವಾಗಿ ಆಹಾರಧಾನ್ಯವನ್ನು ಹತ್ತಿರದ ನ್ಯಾಯಬೆಲೆ ಅಂಗಡಿಯಲ್ಲಿ ವಿತರಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ ತಿಳಿಸಿದ್ದಾರೆ.
ಕೇಂದ್ರ ಸರಕಾರದ ಆದೇಶದಂತೆ ಈ ಯೋಜನೆಯಡಿ ಬರುವ ವಲಸೆ ಕಾರ್ಮಿಕರು ರಾಜ್ಯದಲ್ಲಿ ಮತ್ತು ಬೇರಾವುದೇ ರಾಜ್ಯದಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಪಡಿತರ ಚೀಟಿ ಹೊಂದಿರಬಾರದು. ಆಹಾರಧಾನ್ಯ ವಿತರಿಸುವಾಗ ಇದನ್ನು ಇಲಾಖಾ ತಂತ್ರಾಂಶದ ಪರಿಶೀಲಿಸಿ ಖಾತ್ರಿ ಪಡಿಸಿಕೊಂಡು ಸಂಬಂಧಿಸಿದ ಲಾನುಭವಿಯ ಆಧಾರ್ ಸಂಖ್ಯೆಯ ಮುಖಾಂತರ ಅವರ ಮೊಬೈಲ್ ಸಂಖ್ಯೆ ನಮೂದಿಸಿ, ಒಟಿಪಿ ಬಂದ ನಂತರ ಅದನ್ನು ದಾಖಲಿಸಿ ಉಚಿತವಾಗಿ ಪಡಿತರ ವಿತರಿಸಲಾಗುವುದು.
ಸಂಬಂಧಿಸಿದ ಲಾನುಭವಿ ಆಹಾರಧಾನ್ಯ ಪಡೆಯಲು ನ್ಯಾಯಬೆಲೆ ಅಂಗಡಿಗೆ ಬರುವಾಗ ಕಡ್ಡಾಯವಾಗಿ ಆಧಾರ್ ಕಾರ್ಡುನ್ನು ತರಲೆಬೇಕು. ಮೇ ತಿಂಗಳ ಹಂಚಿಕೆಯನ್ವಯ, ಪ್ರತಿ ಲಾನುಭವಿಗೆ 5 ಕೆ.ಜಿ. ಅಕ್ಕಿಯನ್ನು ಮೇ 26ರಿಂದ 31ರವರೆಗೆ ಹಾಗೂ ಜೂನ್ ತಿಂಗಳಲ್ಲಿ ಜೂ. 1ರಿಂದ 10ರ ವರೆಗೆ ವಿತರಿಸಲಾಗುವುದು. ಒಂದು ವೇಳೆ ಮೇ ತಿಂಗಳಿನಲ್ಲಿ, ಆಹಾರ ಧಾನ್ಯವನ್ನು ಪಡೆಯದ ವಲಸೆ ಲಾನುಭವಿ , ಜೂನ್ ತಿಂಗಳಲ್ಲಿ ಒಟ್ಟಿಗೆ 10 ಕೆ.ಜಿ. ಅಕ್ಕಿ ಮತ್ತು ಕಡಲೆ ಕಾಳು ಉಚಿತವಾಗಿ ಪಡೆಯಲು ಅರ್ಹರಿರುತ್ತಾರೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here