ಹೊಸ ದಿಗಂತ ವರದಿ ಉಡುಪಿ:
ಆಚಾರ್ಯ ಮಧ್ವರು ಉಡುಪಿಯಲ್ಲಿ ಕಡೆಗೋಲ ಶ್ರೀಕೃಷ್ಣನನ್ನು ಪ್ರತಿಷ್ಠಾಪಿಸಿದ ಪರ್ವದಿನವಾದ ಮಕರಸಂಕ್ರಾಂತಿಯಂದು ಅದಮಾರು ಪರ್ಯಾಯ ಮಠಾಧೀಶರು ಸ್ವರ್ಣ ಛತ್ರವನ್ನು ಸಮರ್ಪಿಸಲಾಯಿತು.
ಗುರುವಾರ ಬೆಳಗ್ಗೆ ಶ್ರೀಕೃಷ್ಣ ಮಠದಲ್ಲಿ ಅದಮಾರು ಮಠಾಧೀಶ ಶ್ರೀವಿಶ್ವಪ್ರಿಯತೀರ್ಥ ಸ್ವಾಮೀಜಿ ಅವರ ಮಾರ್ಗದರ್ಶನದಲ್ಲಿ ಪರ್ಯಾಯ ಮಠಾಧೀಶ ಶ್ರೀಈಶಪ್ರಿಯತೀರ್ಥ ಸ್ವಾಮೀಜಿ ಅವರ ಸಂಕಲ್ಪದಂತೆ 50 ಲಕ್ಷ ರೂ. ವೆಚ್ಚದಲ್ಲಿ 2.5 ಕೆ.ಜಿ. ತೂಕದ ‘ಸ್ವರ್ಣ ಛತ್ರ’ವನ್ನು ಸಮರ್ಪಣೆ ನಡೆಯಿತು.
ಈ ಸಂದರ್ಭದಲ್ಲಿ ಪರ್ಯಾಯ ಅದಮಾರು ಯತಿದ್ವಯರೊಂದಿಗೆ ಕೃಷ್ಣಾಪುರ ಮಠಾಧೀಶ ಶ್ರೀವಿದ್ಯಾಸಾಗರತೀರ್ಥ ಸ್ವಾಮೀಜಿ, ಪಲಿಮಾರು ಮಠಾಧೀಶ ಶ್ರೀವಿದ್ಯಾಧೀಶತೀರ್ಥ ಸ್ವಾಮೀಜಿ, ಕಿರಿಯ ಯತಿ ಶ್ರೀವಿದ್ಯಾರಾಜೇಶ್ವರತೀರ್ಥ ಸ್ವಾಮೀಜಿ, ಪೇಜಾವರ ಮಠಾಧೀಶ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ, ಕಾಣಿಯೂರು ಮಠಾಧೀಶ ಶ್ರೀವಿದ್ಯಾವಲ್ಲಭತೀರ್ಥ ಸ್ವಾಮೀಜಿ, ಸೋದೆ ಮಠಾಧೀಶ ಶ್ರೀವಿಶ್ವವಲ್ಲಭತೀರ್ಥ ಸ್ವಾಮೀಜಿ ಉಪಸ್ಥಿತರಿದ್ದರು.