Sunday, June 26, 2022

Latest Posts

ಉಡುಪಿ| ಕಾರಿನಲ್ಲಿ ಗಾಂಜಾ ಮಾರಾಟಕ್ಕೆ ಯತ್ನ: ನಾಲ್ವರು ಆರೋಪಿಗಳ ಬಂಧನ

ಉಡುಪಿ: ಆತ್ರಾಡಿ ಬಸ್ಸು ನಿಲ್ದಾಣ ಬಳಿ ಕಾರಿನಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸಿದ ನಾಲ್ವರು ಆರೋಪಿಗಳನ್ನು ಹಿರಿಯಡ್ಕ ಪೊಲೀಸರು ಬಂಧಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ಚೊಕ್ಕಬೆಟ್ಟು ನಿವಾಸಿ ಇಂಝಾಮಾಮುಲ್ ಹಕ್ (27), ಕೃಷ್ಣಾಪುರ ನಿವಾಸಿಗಳಾದ ಸೈುಫುದ್ದೀನ್ (24), ಆಸೀಫ್ (32) ಹಾಗೂ ಇನ್ನೋರ್ವ ಅಪ್ರಾಪ್ತ ವಯಸ್ಕ ಬಾಲಕ ಬಂಧಿತ ಆರೋಪಿಗಳು.
ಆರೋಪಿಗಳು ಕಾರಿನಲ್ಲಿ ಗಾಂಜಾ ಮಾರಾಟಕ್ಕೆ ಗಿರಾಕಿಗಳನ್ನು ಕಾಯುತ್ತಿದ್ದರು. ಈ ವೇಳೆ ಖಚಿತ ಮಾಹಿತಿ ಆಧರಿಸಿ ದಾಳಿ ಮಾಡಿದ ಪೊಲೀಸರು, ಕಾರಿನಲ್ಲಿದ್ದ 6 ಸಾವಿರ ರೂ. ಮೌಲ್ಯದ 300 ಗ್ರಾಂ ತೂಕದ ಗಾಂಜಾ, 4 ಮೊಬೈಲ್, ರಿಟ್ಜ್ ಕಾರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss