ಉಡುಪಿ: ಕೋವಿಡ್-19 ಹಿನ್ನೆಲೆಯಲ್ಲಿ ಶನಿವಾರ ಸಂಜೆ 7 ಗಂಟೆಯಿಂದ ಸೋಮವಾರ ಬೆಳಗ್ಗೆ 7 ಗಂಟೆಯವರೆಗೆ ಕರ್ಫ್ಯೂ ಇರಲಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ ತಿಳಿಸಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಪೂರ್ವ ನಿಗದಿತ ಮದುವೆಗಳಿಗೆ ಅವಕಾಶ ನೀಡಲಾಗುತ್ತದೆ. ಇದರ ಜೊತೆಯಲ್ಲಿ ತುರ್ತು ಸೇವೆಗಳಾದ ಹಾಲು, ಪತ್ರಿಕೆ ಮತ್ತು ವೈದ್ಯಕೀಯ ಸೇವೆಗಳು ಹೊರತುಪಡಿಸಿ ಯಾವುದನ್ನೂ ತೆರೆಯಲು ಅವಕಾಶ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಅವರು ಹೇಳಿದ್ದಾರೆ.