ಉಡುಪಿ| ಗಂಗೊಳ್ಳಿಯಲ್ಲಿ ಅಕ್ರಮ ಗೋಮಾಂಸ ಸಾಗಾಟ ಮಾಡುತ್ತಿದ್ದ ಮೂವರ ಬಂಧನ

0
3675

ಉಡುಪಿ: ಜಿಲ್ಲೆಯ ಗಂಗೊಳ್ಳಿ ಸಮೀಪ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಮೂವರನ್ನು ಗಂಗೊಳ್ಳಿ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.

ಗಂಗೊಳ್ಳಿಯ ಮುಬಾರಕ್ ಮೊಹಲ್ಲಾ ನಿವಾಸಿ ಇಮ್ರಾನ್, ಮೇಲ್ ಗಂಗೊಳ್ಳಿ ನಿವಾಸಿ ಫೈಸಲ್ ಹಾಗೂ ನಾಯಕವಾಡಿ ನಿವಾಸಿ ಸಫಾ ಬಂಧಿತ ಆರೋಪಿಗಳು. ಆರೋಪಿಗಳ ಪೈಕಿ ಓರ್ವ ತಪ್ಪಿಸಿಕೊಂಡಿದ್ದು, ಆತನನ್ನು ಗಂಗೊಳ್ಳಿ ನಿವಾಸಿ ಜುನೈದ್ ಎಂದು ಗುರುತಿಸಲಾಗಿದೆ.

ಗೋಸಾಗಾಟಕ್ಕೆ ಬಳಸಿದ್ದ ಮಹೀಂದ್ರಾ ಸೆಡ್ ಯುವಿ 500 ವಾಹನ ಮತ್ತು ಸುಮಾರು 50 ಕೆ.ಜಿ.ಯಷ್ಟು ಗೋಮಾಂಸವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಗಂಗೊಳ್ಳಿ ಠಾಣೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸುತ್ತಿದ್ದಾರೆ. ತಪ್ಪಿಸಿಕೊಂಡ ಆರೋಪಿಗೆ ಪೊಲೀಸರು ಬಲೆ ಬೀಸಿದ್ದಾರೆ.

LEAVE A REPLY

Please enter your comment!
Please enter your name here