Wednesday, August 10, 2022

Latest Posts

ಉಡುಪಿ| ಗೃಹ ದಿಗ್ಬಂಧನ ನಿಮಯ ಉಲ್ಲಂಘನೆ: 69 ಜನರ ವಿರುದ್ಧ ಎಫ್ಐಆರ್ ದಾಖಲು

ಉಡುಪಿ: ಜಿಲ್ಲೆಯಾದ್ಯಂತ ಗೃಹ ದಿಗ್ಬಂಧನ ನಿಮಯ ಉಲ್ಲಂಘನೆ ಮಾಡಿದ ಆರೋಪದಡಿ 69 ಜನರ ವಿರುದ್ಧ ವಿವಿಧ ಠಾಣೆಗಳಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿ. ಜಗದೀಶ ತಿಳಿಸಿದ್ದಾರೆ.
ಉಡುಪಿ ಜಿಲ್ಲೆಗೆ ವಿದೇಶ, ಹೊರ ರಾಜ್ಯಗಳಿಂದ ಬಂದಿರುವ ವ್ಯಕ್ತಿಗಳು ಹಾಗೂ ಕೋವಿಡ್ ಸೋಂಕಿತರ ಪ್ರಾಥಮಿಕ ಸಂಪರ್ಕಕ್ಕೆ ಬಂದಿರುವವರನ್ನು ಗೃಹ ದಿಗ್ಬಂಧನಕ್ಕೆ ಒಳಪಡಿಸಲಾಗಿದೆ. ಅವರು 14 ದಿನಗಳ ಕಾಲ ಕಡ್ಡಾಯವಾಗಿ ಗೃಹ ದಿಗ್ಬಂಧನದಲ್ಲೇ ಇರಬೇಕಾಗಿದ್ದು, ನಿಯಮ ಬಾಹಿರವಾಗಿ ಹೊರಗೆ ಹೋಗುವುದು ಕಂಡು ಬರುತ್ತಿದೆ. ಇದರಿಂದ ಕೋವಿಡ್ ಸೋಂಕು ನಿಯಂತ್ರಣಕ್ಕೆ ಹಿನ್ನಡೆಯಾಗಿದೆ.
ಗೃಹ ದಿಗ್ಬಂಧನದಲ್ಲಿರುವವರ ಮೇಲೆ ನಿಗಾ ಇಡಲು ಕ್ವಾರಂಟೈನ್ ವಾಚ್ ಆ್ಯಪ್ ಬಳಕೆಯಾಗುತ್ತಿದೆ. ಇದರಿಂದ ನಿಯಮ ಉಲ್ಲಂಘಿಸುವವರ ವಿವರ ಲಭ್ಯವಾಗುತ್ತಿದೆ. ಇಂತಹವರಿಗೆ ಈಗಾಗಲೇ ಅಧಿಕಾರಿಗಳು ಮನೆ ಭೇಟಿ ನೀಡಿ ಎಚ್ಚರಿಕೆ ನೀಡಿದರೂ ಮತ್ತೆ ಮತ್ತೆ ನಿಯಮ ಉಲ್ಲಂಘಿಸಿದ 69 ಜನರ ಮೇಲೆ ಎಫ್ಐಆರ್ ದಾಖಲಿಸಲಾಗಿದೆ ಎಂದು ತಿಳಿಸಿರುವ ಜಿಲ್ಲಾಧಿಕಾರಿ ಅವರು, ಇನ್ನು ಮುಂದೆ ಯಾರೂ ನಿಯಮ ಉಲ್ಲಂಘಿಸದಂತೆ ಎಚ್ಚರಿಕೆ ನೀಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss