ಹೊಸ ದಿಗಂತ ವರದಿ, ಉಡುಪಿ:
ಜಿಲ್ಲೆಯಲ್ಲಿ ಏಳು ತಾಲೂಕು ಕೇಂದ್ರಗಳಲ್ಲಿರುವ ಮತ ಎಣಿಕೆ ಕೇಂದ್ರಗಳಲ್ಲಿ ಗ್ರಾ.ಪಂ. ಚುನಾವಣೆಯ ಎಣಿಕೆ ಮುಂದುವರಿದಿದೆ.
ಸದ್ಯದ ಮಾಹಿತಿಯಂತೆ ಜಿಲ್ಲೆಯಲ್ಲಿ 26 ಮಂದಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಉಳಿದಂತೆ ಕಾಂಗ್ರೆಸ್ ಬೆಂಬಲಿತ ಹಾಗೂ ಸ್ವತಂತ್ರ 14 ಅಭ್ಯರ್ಥಿಗಳು ವಿಜಯಶಾಲಿಯಾಗಿದ್ದಾರೆ.
ಜಿಲ್ಲೆಯಲ್ಲಿ ಚುನಾವಣೆ ಇಲ್ಲದೇ 128 ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಪೈಕಿ ಬಿಜೆಪಿ ಬೆಂಬಲಿತ 98 ಜನ ಮತ್ತು ಕಾಂಗ್ರೆಸ್ ಬೆಂಬಲಿತ ಸುಮಾರು 30 ಮಂದಿ ಅವಿರೋಧ ಆಯ್ಕೆಗೊಂಡಿದ್ದಾರೆ.
ಜಿಲ್ಲೆಯಲ್ಲಿ ಏಳು ತಾಲೂಕುಗಳ 152 ಗ್ರಾ.ಪಂ.ಗಳ ಒಟ್ಟು 2245 ಸ್ಥಾನಗಳಿಗೆ ಚುನಾವಣೆ ನಡೆದಿದೆ.