Tuesday, June 28, 2022

Latest Posts

ಉಡುಪಿ: ಜಿಲ್ಲಾಡಳಿತದ ವತಿಯಿಂದ ಸರಳ ಕನ್ನಡ ರಾಜ್ಯೋತ್ಸವ

ಉಡುಪಿ: ಜಿಲ್ಲಾಡಳಿತದ ವತಿಯಿಂದ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವವು ಸರಳವಾಗಿ ನಗರದ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು ನಡೆಯಿತು.
ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ ಅವರು ಕನ್ನಡ ರಾಜ್ಯೋತ್ಸವದ ಸಂದೇಶ ನೀಡಿದರು. ಅದಕ್ಕೂ ಮೊದಲು ಕ್ರೀಡಾಂಗಣದಲ್ಲಿ ತಾಯಿ ಭುವನೇಶ್ವರಿ ದೇವಿಗೆ ಪೂಜೆ ಸಲ್ಲಿಸಿದರು.
ಜಿಲ್ಲಾಡಳಿತದ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 36 ಮಂದಿ ಹಾಗೂ ನಾಲ್ಕು ಸಂಘ ಸಂಸ್ಥೆಗಳಿಗೆ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು. 2020ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ಪರಿಶಿಷ್ಟ ಜಾತಿಯ ರಶ್ಮಿತಾ ಎನ್. ಹಾಗೂ ಪಂಗಡದ ಸ್ಪೂರ್ತಿ ಅಶೋಕ್ ರಾಥೋಡ್ ಅವರಿಗೆ ಒಂದು ಲಕ್ಷ ರೂ. ನಗದು ನೀಡಿ ಅಭಿನಂದಿಸಲಾಯಿತು.
ಸರಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿ ಎಸ್.ಎಸ್.ಎಲ್.ಸಿ.ಯಲ್ಲಿ ಜಿಲ್ಲಾ ಮಟ್ಟದಲ್ಲಿ ಗರಿಷ್ಠ ಅಂಕ ಪಡೆದ 9 ಮಂದಿ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಉಡುಪಿ ಶಾಸಕ ಕೆ. ರಘುಪತಿ ಭಟ್, ಜಿ.ಪಂ. ಅಧ್ಯಕ್ಷ ದಿನಕರ ಬಾಬು, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ, ಕಸಾಪ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಜಿ.ಪಂ. ಸಿಇಒ ಡಾ. ನವೀನ್ ಭಟ್, ಎಸ್ಪಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss