ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, May 6, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಉಡುಪಿ ಜಿಲ್ಲೆಯಲ್ಲಿ ಇನ್ನೂ ಎರಡು ದಿನ ಭಾರೀ ಮಳೆಯ ಮುನ್ಸೂಚನೆ: ಹಳದಿ ಅಲರ್ಟ್ ಘೋಷಣೆ

ಉಡುಪಿ: ಜಿಲ್ಲೆಯಲ್ಲಿ ಇನ್ನೂ ಎರಡು ದಿನ ಭಾರೀ ಮಳೆಯ ಮುನ್ಸೂಚನೆಯನ್ನು ನೀಡಿರುವ ಭಾರತೀಯ ಹವಾಮಾನ ಇಲಾಖೆ ಹಳದಿ
ಅಲರ್ಟ್ ಘೋಷಣೆ ಮಾಡಿದೆ.
ಇಲಾಖೆಯ ಬೆಂಗಳೂರು ಪ್ರಾದೇಶಿಕ ಕೇಂದ್ರದ ವರದಿಯು ಅ. 22 ಮತ್ತು 23ರಂದು ಉಡುಪಿ ಜಿಲ್ಲೆಯ ಪ್ರತ್ಯೇಕ ಸ್ಥಳಗಳಲ್ಲಿ ಪ್ರತೀ ದಿನ ಗುಡುಗು ಸಹಿತ, 65 ಮಿ.ಮೀ.ಗಿಂತಲೂ ಅಧಿಕ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನಾ ವರದಿ ನೀಡಿದೆ.
ಬುಧವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡ 24 ತಾಸುಗಳಲ್ಲಿ ಉಡುಪಿ ಜಿಲ್ಲೆಯಲ್ಲಿ ಸರಾಸರಿ 4 ಮಿ.ಮೀ. ಮಳೆಯಾಗಿದೆ. ಉಡುಪಿ ತಾಲೂಕಿನಲ್ಲಿ 12.6 ಮಿ.ಮೀ., ಕುಂದಾಪುರ ತಾಲೂಕಿನಲ್ಲಿ 0.5 ಮಿ.ಮೀ. ಹಾಗೂ ಕಾರ್ಕಳ ತಾಲೂಕಿನಲ್ಲಿ 2 ಮಿ.ಮೀ. ಮಳೆ ಬಿದ್ದಿದೆ. ಜಿಲ್ಲೆಯ ಉದ್ಯಾವರ ಗ್ರಾಮದಲ್ಲಿ 61 ಮಿ.ಮೀ., ಪಡುಬಿದ್ರಿಯಲ್ಲಿ 58 ಮಿ.ಮೀ., ಕಡೆಕಾರು ಗ್ರಾಮದಲ್ಲಿ 51 ಮಿ.ಮೀ. ಮತ್ತು ಬೆಳಪುವಿನಲ್ಲಿ 49 ಮಿ.ಮೀ. ಮಳೆ ಸುರಿದಿದೆ. ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಸಾಧಾರಣದಿಂದ ಉತ್ತಮ ಮಳೆಯಾಗಿದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

spot_imgspot_img

Don't Miss