ಉಡುಪಿ: ಇಂದು ಉಡುಪಿ ಜಿಲ್ಲೆಯಲ್ಲಿ ಮತ್ತೆ 14 ಜನರಲ್ಲಿ ನೋವೆಲ್ ಕೊರೋನಾ ವೈರಸ್ ಕಂಡುಬಂದಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ ಚಂದ್ರ ಸೂಡ ತಿಳಿಸಿದ್ದಾರೆ.
ಸೋಂಕಿತರಲ್ಲಿ ಮಹಾರಾಷ್ಟ್ರದಿಂದ ಉಡುಪಿ ಜಿಲ್ಲೆಗೆ ಬಂದ ನಾಲ್ವರು, ಕೇರಳ ರಾಜ್ಯದಿಂದ ಬಂದ ಒಬ್ಬರಲ್ಲಿ ಸೋಂಕು ದೃಢಪಟ್ಟಿದೆ. ರಾಜ್ಯ ರಾಜಧಾನಿ ಬೆಂಗಳೂರಿಂದ ಆಗಮಿಸಿದ ನಾಲ್ವರಲ್ಲಿ ಹಾಗೂ ಉಡುಪಿ ಜಿಲ್ಲೆಯ ಐದು ಮಂದಿಯಲ್ಲಿ ಕೋವಿಡ್-19 ಖಚಿತವಾಗಿದೆ.
ಜಿಲ್ಲೆಯಲ್ಲಿ ಸ್ಥಳೀಯವಾಗಿ ಸೋಂಕು ಕಾಣಿಸಿಕೊಂಡ ಐದು ಮಂದಿಗೂ ಈ ಹಿಂದೆ ವ್ಯಾಧಿ ದೃಢಪಟ್ಟ ರೋಗಿಗಳ ಪ್ರಾಥಮಿಕ ಸಂಪರ್ಕದಿಂದ ಸೋಂಕು ಅಂಟಿದೆ. ಸೋಂಕಿತ ಎಲ್ಲರನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಉಡುಪಿ ಜಿಲ್ಲೆಯಲ್ಲಿ ಒಟ್ಟು ಕೊರೋನಾ ವೈರಸ್ ಸೋಂಕು ಪೀಡಿತರ ಸಂಖ್ಯೆ 1242ಕ್ಕೆ ತಲುಪಿದೆ. ಈ ಪೈಕಿ 1190 ಮಂದಿ ಸೋಂಕು ಮುಕ್ತರಾಗಿದ್ದಾರೆ ಎಂದು ಡಿಎಚ್ಒ ಡಾ. ಸುಧೀರ್ ಚಂದ್ರ ಸೂಡ ಮಾಹಿತಿ ನೀಡಿದ್ದಾರೆ.