Tuesday, June 28, 2022

Latest Posts

ಉಡುಪಿ ಜಿಲ್ಲೆಯಲ್ಲಿ ದಿನಸಿ ಸಾಮಗ್ರಿಗಳನ್ನು ನಿಗದಿತ ಸಮಯದಲ್ಲಿ ಮಾತ್ರ ಖರೀದಿಸಲು ಅವಕಾಶ

ಉಡುಪಿ: ಜಿಲ್ಲೆಯಲ್ಲಿ ಕೊರೋನಾ ವೈರಸ್ ಸೋಂಕು ಹರಡುವುದು ತಡೆಯುವ ಸಲುವಾಗಿ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ದಿನ ಬಳಕೆ ವಸ್ತುಗಳ ಖರೀದಿಗಾಗಿ ಮಾ. 29ರಿಂದ ಬೆಳಗ್ಗೆ 7ರಿಂದ 11ಗಂಟೆವರೆಗೆ ಸಮಯ ನಿಗದಿಗೊಳಿಸಿ ಜಿಲ್ಲಾಧಿಕಾರಿ ಜಿ.ಜಗದೀಶ ಆದೇಶ ಹೊರಡಿಸಿದ್ದಾರೆ.
ಸಾರ್ವಜನಿಕರು ತಮಗೆ ಅಗತ್ಯವಿರುವ ದಿನಸಿ ಸಾಮಗ್ರಿಗಳನ್ನು ನಿಗದಿತ ಸಮಯದಲ್ಲಿ ಮಾತ್ರ ಖರೀದಿಸಲು ಅವಕಾಶ ನೀಡಲಾಗಿದೆ. ಆವಶ್ಯಕ ವಸ್ತುಗಳನ್ನು ಮಾರಾಟ ಮಾಡುವ ಅಂಗಡಿಗಳು ಈ ಸಮಯದಲ್ಲಿ ಮಾತ್ರ ತೆರೆಯಬೇಕು. ಸಾರ್ವಜನಿಕರು ಅಗತ್ಯವಿರುವ ದಿನಸಿ, ತರಕಾರಿ, ಹಾಲು, ಹಣ್ಣು ಹಂಪಲು, ಮಾಂಸ, ಮೀನು ಆವಶ್ಯಕ ಸಾಮಗ್ರಿಗಳನ್ನು ಖರೀದಿಸಬಹುದು. ಖರೀದಿ ಸಮಯದಲ್ಲಿ ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಪಾಲಿಸಬೇಕು. ನಿಗದಿತ ಅವಧಿ ನಂತರ ಈ ಅಂಗಡಿಗಳನ್ನು ಮುಚ್ಚಬೇಕು ಹಾಗೂ ಈ ನಿರ್ಬಂಧ ಮೆಡಿಕಲ್ ಶಾಪ್‌ಗೆ ಅನ್ವಯಿಸುವುದಿಲ್ಲ. ಹೊಟೇಲ್‌ನಲ್ಲಿ ಪಾರ್ಸೆಲ್ ಸೇವೆ ನೀಡುತ್ತಿರುವವರಿಗೂ ಇದು ಅನ್ವಯ ಆಗುವುದಿಲ್ಲ. ಪಾರ್ಸೆಲ್ ಸೇವೆ ಮುಂದುವರಿಸಬಹುದು ಎಂದು ಜಿಲ್ಲಾಧಿಕಾರಿ ಅವರ ಪ್ರಕಟಣೆ ತಿಳಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss