Monday, July 4, 2022

Latest Posts

ಉಡುಪಿ ಜಿಲ್ಲೆಯಲ್ಲಿ ನೋವೆಲ್ ಕೊರೋನಾ ವೈರಸ್ ದಾಳಿಗೆ ತುತ್ತಾಗಿರುವ ಮೂವರ ಸ್ಥಿತಿ ಗಂಭೀರ

ಉಡುಪಿ: ಜಿಲ್ಲೆಯಲ್ಲಿ ನೋವೆಲ್ ಕೊರೋನಾ ವೈರಸ್ ದಾಳಿಗೆ ತುತ್ತಾಗಿರುವ ಮೂವರ ಸ್ಥಿತಿ ಗಂಭೀರವಾಗಿದೆ. ಈ ಪೈಕಿ ಒಬ್ಬರ ಆರೋಗ್ಯ ಸ್ಥಿತಿ ಚಿಂತಾಜನವಾಗಿದೆ.
ಉಡುಪಿ ಜಿಲ್ಲೆಯಲ್ಲಿ ಕೋವಿಡ್ 1228 ಪ್ರಕರಣಗಳು ಪತ್ತೆಯಾಗಿವೆ. ಮಂಗಳವಾರದವರೆಗೆ ನಾಲ್ವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಬುಧವಾರ ಉಡುಪಿಯ ಡಾ. ಟಿ.ಎಂ.ಎ. ಪೈ ಕೋವಿಡ್ ಆಸ್ಪತ್ರೆಯಲ್ಲಿ ಮೂವರು ತೀವ್ರ ನಿಗಾ ಘಟಕದಲ್ಲಿ ವೆಂಟಿಲೇಟರ್ ಮೂಲಕ ಚಿಕಿತ್ಸೆಯಲ್ಲಿದ್ದಾರೆ. ಈ ಪೈಕಿ ಇಬ್ಬರು ಚೇತರಿಸಿಕೊಳ್ಳುತ್ತಿದ್ದಾರೆ, ಒಬ್ಬರು ಮಾತ್ರ ಇನ್ನೂ ಗಂಭೀರ ಸ್ಥಿತಿಯಲ್ಲಿಯೇ ಮುಂದುವರಿದಿದ್ದಾರೆ ಎಂದು ಆಸ್ಪತ್ರೆಯ ನೋಡಲ್ ಅಧಿಕಾರಿ ಮಾಹಿತಿ ನೀಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss