Monday, August 8, 2022

Latest Posts

ಉಡುಪಿ ಜಿಲ್ಲೆಯಲ್ಲಿ ವರುಣಾರ್ಭಟಕ್ಕೆ 24 ತಾಸುಗಳಲ್ಲಿ 700 ಮನೆಗಳು ಮುಳುಗಡೆ: 2500 ಸಂತ್ರಸ್ತರ ರಕ್ಷಣೆ

ಉಡುಪಿ: ಜಿಲ್ಲೆಯಲ್ಲಿ ಕಳೆದ 24 ತಾಸುಗಳಲ್ಲಿ 700 ಮನೆಗಳು ಮುಳುಗಡೆಯಾಗಿವೆ. ಸುಮಾರು 2500 ಜನರ ರಕ್ಷಣೆ ಮಾಡಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ ತಿಳಿಸಿದ್ದಾರೆ.
ಜಿಲ್ಲಾಡಳಿತ, ಸಾರ್ವಜನಿಕರು, ಜನಪ್ರತಿನಿಧಿಗಳು ನೆರೆಗೆ ಸಿಲುಕಿದ ಸಾವಿರಾರು ಜನರ ರಕ್ಷಣೆ ಮಾಡಿದ್ದಾರೆ ಎಂದು ತಿಳಿಸಿರುವ ಡಿಸಿ, ಜಿಲ್ಲೆಯಾದ್ಯಂತ ಮುಂದಿನ ಎರಡು ದಿನ ರೆಡ್ ಅಲರ್ಟ್ ಘೋಷಣೆ ಆಗಿದೆ. ನದಿ ಪಾತ್ರದ ಜನರು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ಹೇಳಿದ್ದಾರೆ.
ಜಿಲ್ಲೆಯ ಬಹುತೇಕ ಪ್ರದೇಶಗಳಲ್ಲಿ ಪ್ರವಾಹದ ವಾತಾವರಣ ಇದೆ. ರಾತ್ರಿ ವೇಳೆ ಮನೆ ಮುಳುಗಡೆಯಾದರೆ ರಕ್ಷಣಾಕಾರ್ಯ ಕಷ್ಟವಾಗುತ್ತದೆ. ಆದ್ದರಿಂದ ಕುದ್ರು ಪ್ರದೇಶ ಹಾಗೂ ತಗ್ಗು ಪ್ರದೇಶದಲ್ಲಿರುವ ಜನ ತಕ್ಷಣ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಗೊಳ್ಳಬೇಕು. ಜಿಲ್ಲಾಡಳಿತದ ಜೊತೆ ಕೈಜೋಡಿಸಬೇಕು, ಜಿಲ್ಲಾಡಳಿತ ವ್ಯವಸ್ಥೆ ಮಾಡಿರುವ ಪರಿಹಾರ ಕೇಂದ್ರಗಳಿಗೆ ಸ್ಥಳಾಂತರವಾಗಬೇಕು ಎಂದು ಡಿಸಿ ಜಿ. ಜಗದೀಶ ಅವರು ಮನವಿ ಮಾಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss