Tuesday, July 5, 2022

Latest Posts

ಉಡುಪಿ ಜಿಲ್ಲೆಯಲ್ಲಿ ಸುಗಮವಾಗಿ ನಡೆದ ಎಸ್ಸೆಸೆಲ್ಸಿ ಪ್ರಥಮ ಭಾಷೆ ಪರೀಕ್ಷೆ: 94 ಮಂದಿ ಗೈರು

ಉಡುಪಿ: ಜಿಲ್ಲೆಯಲ್ಲಿ ಎಸ್ಸೆಸೆಲ್ಸಿ ಪ್ರಥಮ ಭಾಷೆ ಪರೀಕ್ಷೆಯು ಗುರುವಾರ ಸುಗಮವಾಗಿ ಜರಗಿದ್ದು, 94 ಮಂದಿ ಗೈರು ಹಾಜರಾಗಿದ್ದಾರೆ ಎಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶೇಷಶಯನ ಕಾರಿಂಜ ತಿಳಿಸಿದ್ದಾರೆ.
ಪ್ರಥಮ ಭಾಷೆ ಪರೀಕ್ಷೆಗೆ ಉಡುಪಿ ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ ವಲಸೆ ಬಂದವರು ಸೇರಿ ಒಟ್ಟು 13,548 ಮಂದಿ ಹೆಸರು ನೋಂದಾಯಿಸಿದ್ದರು. ಈ ಪೈಕಿ 588 ಮಂದಿ ಜಿಲ್ಲೆಯಿಂದ ಹೊರಗೆ ವಲಸೆ ಹೋಗಿದ್ದುಘಿ, 95 ವಿದ್ಯಾರ್ಥಿಗಳಿಗೆ ಹಾಜರಾತಿ ಕೊರತೆಯಿಂದ ಪರೀಕ್ಷೆಗೆ ಅನರ್ಹರಾಗಿದ್ದಾರೆ. ಉಳಿದ 12,771 ಮಂದಿ ಪರೀಕ್ಷೆ ಬರೆದಿದ್ದಾರೆ. ಹೊರ ಜಿಲ್ಲೆಗಳಿಂದ ಆಗಮಿಸಿ ಪರೀಕ್ಷೆಗೆ ನೋಂದಾಯಿಸಿದ್ದ 82 ವಿದ್ಯಾರ್ಥಿಗಳೆಲ್ಲರೂ ಹಾಜರಾಗಿದ್ದಾರೆ.
ರೆಗ್ಯುಲರ್ ಆಗಿ ಮೊದಲ ಬಾರಿ 12,191 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದಾರೆ. ಖಾಸಗಿಯಾಗಿ ಮೊದಲ ಬಾರಿಗೆ 413 ಮಂದಿ ಹೆಸರು ನೋಂದಾಯಿಸಿದ್ದು, 345 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಉಳಿದ 68 ಮಂದಿ ಗೈರು ಹಾಜರಾಗಿದ್ದಾರೆ ಎಂದು ಡಿಡಿಪಿಐ ಮಾಹಿತಿ ನೀಡಿದ್ದಾರೆ.
ಗುರುವಾರವೂ ನಿಯಂತ್ರಿತ ವಲಯದಿಂದ 10 ವಿದ್ಯಾರ್ಥಿಗಳು, ಅನಾರೋಗ್ಯಕ್ಕೆ ತುತ್ತಾದ 14 ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಗಳಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿತ್ತು. ಶೀತ-ಜ್ವರದಂತಹ ಲಕ್ಷಣಗಳಿರುವ ವಿದ್ಯಾರ್ಥಿಗಳ ಗಂಟಲ ದ್ರವದ ಮಾದರಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗುತ್ತಿದೆ ಎಂದು ಡಿಡಿಪಿಐ ಶೇಷಶಯನ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss