Sunday, August 14, 2022

Latest Posts

ಉಡುಪಿ ಜಿಲ್ಲೆಯಲ್ಲಿ 2 ಕೊರೋನಾ ಪಾಸಿಟಿವ್: ಸೋಂಕಿತರ ಸಂಖ್ಯೆ 1028ಕ್ಕೆ ಏರಿಕೆ

ಉಡುಪಿ: ಜಿಲ್ಲೆಯಲ್ಲಿ ಸೋಮವಾರ 2 ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1028ಕ್ಕೆ ಹೆಚ್ಚಳವಾಗಿದೆ.
ಹೊಸ ಇಬ್ಬರು ಸೋಂಕಿತರಲ್ಲಿ 21ರ ಹರೆಯದ ಮಹಿಳೆ ಎರಡು ದಿನಗಳ ಹಿಂದೆ ಮಹಾರಾಷ್ಟ್ರದಿಂದ ಜಿಲ್ಲೆಗೆ ಆಗಮಿಸಿದ್ದರು. ಅವರಲ್ಲಿ ರೋಗಲಕ್ಷಣಗಳು ಕಂಡುಬಂದಿದ್ದರಿಂದ ಪರೀಕ್ಷೆಗೊಳಪಡಿಸಲಾಗಿತ್ತು. ಇನ್ನೊಬ್ಬ 29 ವರ್ಷ ಪ್ರಾಯದ ಮಹಿಳೆಗೆ ಖಾಸಗಿ ಆಸ್ಪತ್ರೆಯ ಲ್ಯಾಬ್ ಟೆಕ್ನಿಷಿಯನ್ ಸಂಪರ್ಕದಿಂದ ಸೋಂಕು ಹರಡಿದೆ. ಇಬ್ಬರನ್ನು ಉಡುಪಿಯ ಕೋವಿಡ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.
ಲ್ಯಾಬ್ ಟೆಕ್ನಿಷಿಯನ್‌ನಿಂದ ಮೂವರಿಗೆ ಸೋಂಕು
ಕಳೆದ 9ದಿನಗಳ ಹಿಂದೆ ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುವ 30ರ ಹರೆಯದ ಮಹಿಳೆಗೆ ಕೋವಿಡ್-19 ಸೋಂಕು ದೃಢಪಟ್ಟಿತ್ತು. ಮರುದಿನಅವರ 5ವರ್ಷ ಪ್ರಾಯದ ಮಗುವಿಗೆ ಸೋಂಕು ಕಾಣಿಸಿಕೊಂಡಿತ್ತು. ನಂತರ 71ರ ಹರೆಯದ ಅವರ ತಂದೆ ಹಾಗೂ ಈಗ 29 ವರ್ಷ ಪ್ರಾಯದ ನಾದಿನಿಯಲ್ಲಿ ಸೋಂಕು ಪತ್ತೆಯಾಗಿದೆ. ಲ್ಯಾಬ್ ಟೆಕ್ನಿಷಿಯನ್‌ಗೆ ಯಾವ ಮೂಲದಿಂದ ಸೋಂಕು ಹರಡಿದೆ ಎಂಬ ಮಾಹಿತಿಯೇ ಲಭ್ಯವಾಗಿಲ್ಲ. ಇದೀಗ ಅವರಿಂದ ಸೋಂಕು ಪಸರಿಸುತ್ತಿರುವುದು ಆತಂಕ ಹೆಚ್ಚುವಂತೆ ಮಾಡಿದೆ.
ಉಡುಪಿ ಜಿಲ್ಲೆಯಲ್ಲಿ ಈವರೆಗೆ ಒಟ್ಟು 1028 ಮಂದಿಯಲ್ಲಿ ಕೋವಿಡ್ -19 ಸೋಂಕು ಕಾಣಿಸಿಕೊಂಡಿದೆ. ಈ ಪೈಕಿ 920ಮಂದಿ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು, ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಅವರೆಲ್ಲರೂ ಆರೋಗ್ಯವಾಗಿದ್ದು, ಎಲ್ಲರನ್ನು ಮತ್ತೆ 14 ದಿನಗಳ ಕಾಲ ಗೃಹ ದಿಗ್ಬಂಧನದಲ್ಲಿರಿಸಿ, ಆರೋಗ್ಯದ ಬಗ್ಗೆ ನಿಗಾ ವಹಿಸಲಾಗುತ್ತಿದೆ. ಕೋವಿಡ್ ಆಸ್ಪತ್ರೆಯಲ್ಲಿ 205 ಮಂದಿ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆಯಲ್ಲಿದ್ದಾರೆ. ಕೆಲವರಿಗೆ ಮರುಪರೀಕ್ಷೆ ನಡೆಸಿದ ವೇಳೆ ಮತ್ತೆ ಮತ್ತೆ ಪಾಸಿಟಿವ್ ಬರುತ್ತಿದೆ. ಅವರಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ ಅವರು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss