Wednesday, August 10, 2022

Latest Posts

ಉಡುಪಿ| ದೇವಸ್ಥಾನಗಳ ಆನ್ ಲೈನ್ ಸೇವೆ: ಜಿಲ್ಲೆಯ 4 ದೇವಸ್ಥಾನಗಳಲ್ಲಿ ಸೇವೆಗಳ ಆನ್‌ಲೈನ್ ಬುಕ್ಕಿಂಗ್ ಆರಂಭ

ಉಡುಪಿ: ರಾಜ್ಯ ಮುಜರಾಯಿ ಇಲಾಖೆ ಅಧೀನಕ್ಕೊಳಪಟ್ಟ ಆಯ್ದ 52 ದೇವಸ್ಥಾನಗಳಲ್ಲಿ ಆನ್‌ಲೈನ್ ಸೇವೆ ಆರಂಭಿಸುತ್ತಿದ್ದು, ಉಡುಪಿ ಜಿಲ್ಲೆಯ ನಾಲ್ಕು ದೇವಸ್ಥಾನಗಳು ಸೇರಿವೆ.

ಬೈಂದೂರು ತಾಲೂಕಿನ ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನ, ಬ್ರಹ್ಮಾವರ ತಾಲೂಕಿನ ಅಮೃತೇಶ್ವರಿ ಮತ್ತು ಮಂದಾರ್ತಿ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನ ಹಾಗೂ ಕಾಪು ತಾಲೂಕಿನ ಎಲ್ಲೂರು ಶ್ರೀಮಹತೋಬಾರ ವಿಶ್ವೇಶ್ವರ ದೇವಸ್ಥಾನಗಳಲ್ಲಿ ಸೇವೆಗಳ ಆನ್‌ಲೈನ್ ಬುಕ್ಕಿಂಗ್ ಆರಂಭಗೊಳ್ಳಲಿದೆ.

ಮಂಗಳವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಸಮ್ಮುಖದಲ್ಲಿ ಸೇವೆಗಳ ಆನ್‌ಲೈನ್ ಬುಕ್ಕಿಂಗ್ ಆ್ಯಪ್ ಅನ್ನು ಅಧಿಕೃತವಾಗಿ ಬಿಡುಗಡೆ ಮಾಡಿದ್ದಾರೆ.

ಆಸ್ತಿಕ ಭಕ್ತರು www.pureprayer.com ಆ್ಯಪ್ ಡೌನ್‌ಲೋಡ್ ಮಾಡಿಕೊಂಡು ತಮ್ಮ ಸೇವೆಯನ್ನು ಖಾತ್ರಿ ಪಡಿಸಿಕೊಳ್ಳಬಹುದಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss