Wednesday, June 29, 2022

Latest Posts

ಉಡುಪಿ ನಗರಸಭೆ ಆರೋಗ್ಯ ನಿರೀಕ್ಷಕರಿಗೆ ಸೋಂಕು ದೃಢ, ನಗರಸಭೆ ಕಚೇರಿ ಸೀಲ್ ಡೌನ್

ಉಡುಪಿ: ಉಡುಪಿ ನಗರಸಭೆ ಆರೋಗ್ಯ ನಿರೀಕ್ಷಕರಿಗೆ ಕೋವಿಡ್ -19 ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ನಗರದ ಹೃದಯ ಭಾಗದಲ್ಲಿರುವ ನಗರಸಭೆ ಕಚೇರಿ ಸೀಲ್ ಡೌನ್ ಮಾಡಲಾಗಿದೆ.
ಸೋಂಕು ದೃಢಪಟ್ಟಿರುವ ಸಿಬ್ಬಂದಿ ಹಲವು ದಿನಗಳಿಂದ ಗೃಹ ದಿಗ್ಬಂಧನದಲ್ಲಿದ್ದರು. ಗಂಟಲ ದ್ರವ ಮಾದರಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಿದಾಗ ಕೊರೋನಾ ವೈರಸ್ ಇರುವುದು ಪತ್ತೆಯಾಗಿದೆ‌. ಅವರನ್ನು ವಿಶೇಷ ‌ಕೋವಿಡ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ದಿಗ್ಬಂಧನಕ್ಕೆ ಒಳಪಡಿಸಲಾಗಿದೆ.
ನಗರದ ಕವಿ ಮುದ್ದಣ ಮಾರ್ಗದಲ್ಲಿರುವ ಉಡುಪಿ ನಗರಸಭೆ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ. ಸೋಂಕು ನಿವಾರಕ ದ್ರಾವಣವನ್ನು ಸಿಂಪಡಿಸಲಾಗಿದೆ. ಕಚೇರಿ ಕಾರ್ಯನಿರ್ವಹಣೆ ಎಂದಿನಂತೆ ನಡೆಯುತ್ತದೆ.‌ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss