Tuesday, July 5, 2022

Latest Posts

ಉಡುಪಿ: ನ್ಯಾಯಬೆಲೆ ಅಂಗಡಿಗಳಲ್ಲಿ ಆಹಾರಧಾನ್ಯ ವಿತರಣೆ

ಉಡುಪಿ: ನಾಳೆಯಿಂದ ಜಿಲ್ಲೆಯ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಆಹಾರಧಾನ್ಯವನ್ನು ವಿತರಿಸಲಾಗುತ್ತದೆ.

ಸಾರ್ವಜನಿಕ ವಿತರಣಾ ಪದ್ಧತಿಯಡಿಯಲ್ಲಿ ಕೇಂದ್ರ ಸರಕಾರದ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಏಪ್ರಿಲ್ ಮತ್ತು ಮೇ-2020ರ ಮಾಹೆಗೆ ಬಿಡುಗಡೆಯಾಗಿರುವ ಆಹಾರಧಾನ್ಯ ವಿತರಿಸಲಾಗುವುದು.

ಅಂತ್ಯೋದಯ ಕಾರ್ಡಿನ ಪ್ರತಿ ಸದಸ್ಯರಿಗೆ ಹಾಗೂ ಬಿ.ಪಿ.ಎಲ್. ಕಾರ್ಡಿನ ಪ್ರತಿ ಸದಸ್ಯರಿಗೆ ಏಪ್ರಿಲ್ ಮತ್ತು ಮೇ ತಿಂಗಳಿಗೆ 5ಕೆ.ಜಿ.ಯಂತೆ ಒಟ್ಟು 10 ಕೆ.ಜಿ. ಅಕ್ಕಿ ಹಾಗೂ ಪ್ರತಿ ಕಾರ್ಡಿಗೆ 1 ಕೆ.ಜಿ. ತೊಗರಿಬೇಳೆ ಉಚಿತ ವಿತರಣೆ ನಡೆಸಲಾಗುವುದು. ಬಿಪಿಎಲ್ ಪ್ರತಿ ಕಾರ್ಡಿಗೆ ಏಪ್ರಿಲ್ ಮತ್ತು ಮೇ ತಿಂಗಳಿಗೆ 2 ಕೆ.ಜಿ.ಯಂತೆ ಒಟ್ಟು 4 ಕೆ.ಜಿ. ಗೋಧಿಯನ್ನು ವಿತರಿಸಲಾಗುವುದು.

ಹೊಸದಾಗಿ ಅರ್ಜಿ ಸಲ್ಲಿಸಿರುವ ಬಿಪಿಎಲ್ ಫಲಾನುಭವಿಗಳಿಗೆ ಪ್ರತಿ ಅರ್ಜಿಗೆ 10 ಕೆ.ಜಿ. ಅಕ್ಕಿಯನ್ನು ಉಚಿತವಾಗಿ ವಿತರಿಸಲಾಗುವುದು. ಆಹಾರಧಾನ್ಯ ಪಡೆಯಲು ನೋಂದಾಯಿಸದೆ ಇರುವ ಎಪಿಎಲ್ ಏಕ ಸದಸ್ಯ ಪಡಿತರ ಚೀಟಿ ಕಾರ್ಡಿಗೆ 5 ಕೆ.ಜಿ. ಅಕ್ಕಿ ಮತ್ತು 2 ಮತ್ತು ಹೆಚ್ಚಿನ ಸದಸ್ಯರಿರುವ ಕಾರ್ಡುಗಳಿಗೆ 10 ಕೆ.ಜಿ. ಅಕ್ಕಿ ಪ್ರತಿ ಕೆಜಿಗೆ 15 ರೂ.ಗಳಂತೆ ವಿತರಿಸಲಾಗುವುದು. ಅಂತರ ರಾಜ್ಯ/ಅಂತರ-ಜಿಲ್ಲೆ ಪಡಿತರ ಚೀಟಿದಾರರು ಪೋರ್ಟಿಬಿಲಿಟಿಯಲ್ಲಿ ಆಹಾರಧಾನ್ಯ ಪಡೆಯಲು ಅವಕಾಶವಿದ್ದು, ಜಿಲ್ಲೆಯ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆಯಬಹುದಾಗಿದೆ.

ನ್ಯಾಯಬೆಲೆ ಅಂಗಡಿಗಳಲ್ಲಿ ಕಡ್ಡಾಯವಾಗಿ ಪಡಿತರ ಚೀಟಿದಾರರ ಆಧಾರ್ ದೃಢೀಕೃತ ಬೆರಳಚ್ಚು (ಆಧಾರ್ ಬಯೋಮೆಟ್ರಿಕ್)/ಆಧಾರ್ ಓಟಿಪಿ/ಮೊಬೈಲ್ ಓಟಿಪಿ ದೃಢೀಕರಣದ ಮೂಲಕವೇ ಪಡಿತರ ವಿತರಿಸಲಾಗುವುದು. ಎಲ್ಲ ಪಡಿತರ ಚೀಟಿದಾರರು ಮೇ 25ರೊಳಗೆ ಕಡ್ಡಾಯವಾಗಿ ಆಹಾರಧಾನ್ಯವನ್ನು ಪಡೆದುಕೊಳ್ಳುವಂತೆ ತಿಳಿಸಿದೆ.

ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಚೀಟಿದಾರರು ಪಡಿತರ ಪಡೆಯುವಾಗ ಸಾಮಾಜಿಕ ಅಂತರ ಕಾಯ್ದುಕೊಂಡು ಮಾಸ್ಕ್ ಗಳನ್ನು ಹಾಕಿಕೊಂಡು ಹಾಗೂ ಬೆರಳಚ್ಚು ದೃಢೀಕರಣ ನೀಡುವ ಮೊದಲು ಸ್ಯಾನಿಟೈಸರ್ ಬಳಸಿ ಪಡಿತರ ಪಡೆಯುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss