Wednesday, July 6, 2022

Latest Posts

ಉಡುಪಿ| ಪಡುಬಿದ್ರಿಯಲ್ಲಿ ಆತಂಕ ಹುಟ್ಟಿಸಿದ್ದ ಚಿರತೆ ಕೊನೆಗೂ ಅರೆಸ್ಟ್

ಉಡುಪಿ: ಕಳೆದ ಕೆಲವು ದಿನಗಳಿಂದ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪಡುಬಿದ್ರಿಯಲ್ಲಿ ಆತಂಕ ಹುಟ್ಟಿಸಿದ್ದ ಚಿರತೆಯೊಂದು ಶುಕ್ರವಾರ ಮುಂಜಾನೆ ಬೋನಿಗೆ ಬಿದ್ದಿದೆ.
ಪಡುಬಿದ್ರಿ ಸಮೀಪದ ಸಾಂತೂರು ರವಿ ಶೆಟ್ಟಿ ಎಂಬವರ ತೋಟದಲ್ಲಿ ಚಿರತೆಯು ಅರಣ್ಯ ಇಲಾಖೆಯವರು ಇರಿಸಿದ್ದ ಬೋನಿನಲ್ಲಿ ಬಂಧಿಯಾಗಿದೆ. ರವಿ ಶೆಟ್ಟಿ ಮನೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಚಿರತೆ ಓಡಾಟದ ದೃಶ್ಯ ಸೆರೆಯಾಗಿತ್ತು. ಈ ಹಿನ್ನೆಲೆಯಲ್ಲಿ ಉಡುಪಿ ವಲಯ ಅರಣ್ಯಾಧಿಕಾರಿಗಳು ಚಿರತೆ ಹಿಡಿಯಲು ಬೋನು ಇಟ್ಟಿದ್ದರು.
ಶುಕ್ರವಾರ ಮುಂಜಾವ ಹೆಣ್ಣು ಚಿರತೆ ಬೋನಿಗೆ ಬಿದ್ದಿದೆ. ಮಾಹಿತಿ ತಿಳಿಯುತ್ತಿದ್ದಂತೆ, ಸ್ಥಳಕ್ಕೆ ಅರಣ್ಯಾಧಿಕಾರಿ ಹಾಗೂ ಸಿಬ್ಬಂದಿ ಭೇಟಿ ನೀಡಿದ್ದಾರೆ. ವಲಯ ಅರಣ್ಯಾಧಿಕಾರಿ ಕ್ಲಿಫರ್ಡ್ ಲೋಬೋ, ಉಪ ಅರಣ್ಯ ಅಧಿಕಾರಿಗಳಾದ ಜೀವನದಾಸ್ ಶೆಟ್ಟಿ, ಗುರುರಾಜ್, ಅಭಿಲಾಶ್ ಜಯರಾಮ ಶೆಟ್ಟಿ, ಮಂಜುನಾಥ್ ನಾಯಕ್, ಪರಶುರಾಮ ಹಾಜರಾಗಿದ್ದಾರೆ. ಬಳಿಕ ಚಿರತೆಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss