ಹೊಸ ದಿಗಂತ ವರದಿ ಉಡುಪಿ:
ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಮೊದಲ ಬಾರಿ ಉಡುಪಿ ಜಿಲ್ಲೆಗೆ ಆಗಮಿಸಿದ ಡಿ.ಕೆ. ಶಿವಕುಮಾರ್ ಅವರು ಕುಂದಾಪುರ ತಾಲೂಕಿನ ಕಮಲಶಿಲೆಯ ಬ್ರಾಹ್ಮೀ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ, ದೇವಿಯ ದರ್ಶನ ಪಡೆದರು.
ದೇವಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಡಿ.ಕೆ.ಶಿ. ರಾತ್ರಿ ಉತ್ಸವದಲ್ಲಿಯೂ ಪಾಲ್ಗೊಂಡರು. ಅಲ್ಲದೇ ಅಲ್ಲೇ ಪ್ರಸಾದವನ್ನೂ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ವಿನಯಕುಮಾರ ಸೊರಕೆ, ಮಾಜಿ ಶಾಸಕ ಗೋಪಾಲ ಪೂಜಾರಿ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.