Saturday, August 13, 2022

Latest Posts

ಉಡುಪಿ| ಭಾರೀ ಮಳೆ: ರೆಡ್ ಅಲರ್ಟ್ ಘೋಷಣೆ

ಉಡುಪಿ: ಇಂದು ಬೆಳಗ್ಗೆ ಉಡುಪಿ ಮತ್ತು ದ.ಕ. ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಿದ್ದರೆ, ಮಳೆ ತೀವ್ರತೆಯ ಹಿನ್ನೆಲೆಯಲ್ಲಿ ಮಧ್ಯಾಹ್ನ ರೆಡ್ ಅಲರ್ಟ್ ಘೋಷಿಸಲಾಗಿದೆ. ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ಕೇಂದ್ರವು ಜಿಲ್ಲೆಯಲ್ಲಿ ಎಚ್ಚರಿಕೆಯಿಂದ ಇರುವಂತೆ ಮುನ್ಸೂಚನೆ ನೀಡಿದೆ.

ಮಧ್ಯಾಹ್ನ 1ಗಂಟೆಗೆ ಪ್ರಕಟಿಸಿರುವ ಹವಾಮಾನ ಮುನ್ಸೂಚನಾ ವರದಿಯಲ್ಲಿ, ಉಡುಪಿ ಮತ್ತು ದ.ಕ. ಜಿಲ್ಲೆಯಲ್ಲಿ ವಿಪರೀತ ಭಾರೀ ಮಳೆಯಾಗುವ ನಿರೀಕ್ಷೆಯಲ್ಲಿ ರೆಡ್ ಅಲರ್ಟ್ ಘೋಷಿಸಿ, ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ. ಬೆಳಗ್ಗೆ 10ಗಂಟೆಗೆ ಪ್ರಕಟಿಸಿದ ವರದಿಯಲ್ಲೂ ಆರೆಂಜ್ ಅಲರ್ಟ್ ಘೋಷಿಸಿತ್ತು.

ಇದೀಗ ನಾಳೆ ಬೆಳಗ್ಗೆ 8.30ರ ವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಬೇರೆ ಬೇರೆ ಸ್ಥಳಗಳಲ್ಲಿ 115ರಿಂದ 205 ಮಿ.ಮೀ.ವರೆಗೆ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss