ಉಡುಪಿ: ಜಿಲ್ಲೆಯಲ್ಲಿ ಮಾದಕ ವಸ್ತು ಸಾಗಾಟ ಮತ್ತು ಮಾರಾಟ ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಗಳ ಪರೇಡನ್ನು ಬುಧವಾರ ನಗರದ ಚಂದು ಮೈದಾನದಲ್ಲಿ ನಡೆಸಲಾಯಿತು.
ಕುಂದಾಪುರ ಠಾಣಾ ವ್ಯಾಪ್ತಿಯಿಂದ 18 ಜನ, ಮಣಿಪಾಲ ಠಾಣಾ ವ್ಯಾಪ್ತಿಯಿಂದ 16 ಜನ, ಉಡುಪಿ ನಗರ ಠಾಣಾ ವ್ಯಾಪ್ತಿಯಿಂದ 12 ಜನ, ಮಲ್ಪೆ ಮತ್ತು ಪಡುಬಿದ್ರಿ ಠಾಣಾ ವ್ಯಾಪ್ತಿಗಳಿಂದ ತಲಾ ಐವರು, ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಿಂದ ನಾಲ್ವರು, ಕಾಪು ಠಾಣಾ ವ್ಯಾಪ್ತಿಯಿಂದ ಮೂವರು, ಬೈಂದೂರು, ಕಾರ್ಕಳ ನಗರ, ಕೋಟ ಮತ್ತು ಸೆನ್ ಪೊಲೀಸ್ ಠಾಣಾ ವ್ಯಾಪ್ತಿಯಿಂದ ತಲಾ ಇಬ್ಬರು ಹಾಗೂ ಹಿರಿಯಡ್ಕ ಠಾಣಾ ವ್ಯಾಪ್ತಿಯಿಂದ ಓರ್ವ ಒಟ್ಟು 72 ಮಂದಿ ಆರೋಪಿಗಳು ಪರೇಡ್ನಲ್ಲಿ ಹಾಜರಿದ್ದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಚಂದ್ರ, ಉಡುಪಿ ಡಿವೈಎಸ್ಪಿ ಟಿ.ಆರ್. ಜೈಶಂಕರ್, ಸಶಸ್ತ್ರ ಮೀಸಲು ಪಡೆಯ ಡಿವೈಎಸ್ಪಿ ರಾಘವೇಂದ್ರ, ಉಡುಪಿ ಪೊಲೀಸ್ ವೃತ್ತ ನಿರೀಕ್ಷಕ ಮಂಜುನಾಥ ಹಾಗೂ ಜಿಲ್ಲೆಯ ಇತರ ಠಾಣೆಗಳ ಪೊಲೀಸ್ ಉಪನಿರೀಕ್ಷಕರು ಪರೇಡ್ನಲ್ಲಿ ಉಪಸ್ಥಿತರಿದ್ದರು.