ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, June 22, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಉಡುಪಿ: ರಾಜ್ಯ ಕಂದಾಯ ಇಲಾಖೆಯಿಂದ ಪ್ರಾಕೃತಿಕ ವಿಕೋಪ ನಿರ್ವಹಣಾ ನಿಧಿಗೆ 5 ಕೋಟಿ ರೂ.ಬಿಡುಗಡೆ

ಉಡುಪಿ: ಜಿಲ್ಲೆಯಲ್ಲಿ ನೆರೆ ಪರಿಹಾರಕ್ಕಾಗಿ ಪ್ರಾಕೃತಿಕ ವಿಕೋಪ ನಿರ್ವಹಣಾ ನಿಧಿಗೆ 5 ಕೋಟಿ ರೂ.ಗಳನ್ನು ರಾಜ್ಯ ಕಂದಾಯ ಇಲಾಖೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.
ಶುಕ್ರವಾರ ಜಿಲ್ಲೆಯ ಪಡುಬಿದ್ರಿ ಕಡಲತೀರದಲ್ಲಿ ಕಡಲುಕೊರೆತ ವೀಕ್ಷಣೆ ಮಾಡಿದ ಸಚಿವರು ಈ ವಿಚಾರ ಪ್ರಕಟಿಸಿದರು.
ಈಗಾಗಲೇ ಜಿಲ್ಲಾಧಿಕಾರಿ ಅವರ ಖಾತೆಯಲ್ಲಿ 3.5 ಕೋಟಿ ರೂ.ಗಳಿವೆ. ಇದೀಗ 5ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದ್ದು, ಪರಿಹಾರ ನೀಡಲು ಹಣದ ಕೊರತೆ ಉಂಟಾಗುವುದಿಲ್ಲ. ಇದು ಕೇವಲ ನೆರೆ ಪರಿಹಾರಕ್ಕಾಗಿ ಮೀಸಲಿರುತ್ತದೆ ಎಂದು ಸಚಿವ ಆರ್. ಅಶೋಕ್ ಹೇಳಿದರು.
ಪಡುಬಿದ್ರಿಯಲ್ಲಿ ಪ್ರವಾಸೋದ್ಯಮದ ನಿಟ್ಟಿನಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ನಡೆಸಲಾಗಿತ್ತು. ಇದೀಗ ಕಡಲುಕೊರೆತ ಉಂಟಾಗಿ ಎಲ್ಲವೂ ಸಮುದ್ರಪಾಲಾಗುತ್ತಿದೆ. ಆದ್ದರಿಂದ ಈ ಪ್ರದೇಶದಲ್ಲಿ ಶಾಶ್ವತ ಕಾಮಗಾರಿಯನ್ನು ನಡೆಸಲಾಗುವುದು ಎಂದು ಸಚಿವರು ತಿಳಿಸಿದರು.
ಈ ವೇಳೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಮೊದಲಾದವರಿದ್ದರು‌.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss