Tuesday, August 16, 2022

Latest Posts

ಉಡುಪಿ| ರೆಡ್ ಕ್ರಾಸ್ ಸಂಸ್ಥೆಯ ಶತಮಾನೋತ್ಸವ: ರಕ್ತದಾನ ಶಿಬಿರ

ಉಡುಪಿ: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ ಮತ್ತು ಕುಂದಾಪುರ ರಕ್ತನಿಧಿ ಕೇಂದ್ರ ಸಹಯೋಗದೊಂದಿಗೆ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಶತಮಾನೋತ್ಸವದ ಅಂಗವಾಗಿ ಅಜ್ಜರಕಾಡು ರೆಡ್ ಕ್ರಾಸ್ ಭವನದಲ್ಲಿ ಬುಧವಾರ ರಕ್ತದಾನ ಶಿಬಿರ ಆಯೋಜಿಸಲಾಯಿತು.

ಉಡುಪಿ ಶಾಸಕ ಕೆ. ರಘುಪತಿ ಭಟ್ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ, ರೆಡ್ ಕ್ರಾಸ್ ಸಂಸ್ಥೆ ಆಯೋಜಿಸಿರುವ ರಕ್ತದಾನ ಶಿಬಿರಕ್ಕೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕದ ಸಭಾಪತಿ ಬಸ್ರೂರು ರಾಜೀವ ಶೆಟ್ಟಿ, ಉಪಸಭಾಪತಿ ಅಶೋಕ್ ಕುಮಾರ್ ವೈ.ಜಿ., ಖಜಾಂಚಿ ಟಿ. ಚಂದ್ರಶೇಖರ್, ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ, ಮತ್ತು ಕಾರ್ಯಕಾರಿ ಸಮಿತಿಯ ಸದಸ್ಯರಾದ ಸಮಂತ್ ಹೆಗ್ಡೆ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss