ಉಡುಪಿ: ಬೆಳಗಾವಿಯಿಂದ ಮಂಗಳೂರು ಕಡೆಗೆ ವಧೆ ಮಾಡಲು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 24 ಕರು ಕೋಣಗಳನ್ನು ಉಡುಪಿ ಜಿಲ್ಲಾ ಪೊಲೀಸರು ಇಂದು ರಕ್ಷಿಸಿದ್ದಾರೆ. ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.
ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ನಿವಾಸಿ ಮೆಹಬೂಬ್ (27), ಚಿಕ್ಕನಹಳ್ಳಿ ಹೊಸ ಬಡಾವಣೆ ನಿವಾಸಿ ಇಮ್ರಾನ್ (29), ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕು ಬಾಪು ಸಾಹೇಬ್ (46) ಮತ್ತು ಆಸಿಫ್ (23) ಬಂಧಿತ ಆರೋಪಿಗಳಾಗಿದ್ದಾರೆ.
ಉಡುಪಿ ಜಿಲ್ಲೆಯನ್ನು ಶಿವಮೊಗ್ಗ ಜಿಲ್ಲೆಗೆ ಸಂಪರ್ಕಿಸುವ ಹೊಸಂಗಡಿ ಗಡಿಯಲ್ಲಿರುವ ಪೊಲೀಸ್ ಚೆಕ್ ಪೋಸ್ಟ್ ನಲ್ಲಿ ಘಟನೆ ನಡೆದಿದೆ. ಖಚಿತ ಮಾಹಿತಿ ಮೇರೆಗೆ ಇಂದು ಬೆಳಗ್ಗೆ 9.30ರ ಸುಮಾರಿಗೆ ಹೊಸನಗರದ ಹುಲಿಕಲ್ ಘಾಟಿ ಕಡೆಯಿಂದ ಹೊಸಂಗಡಿ ಕಡೆಗೆ ಬಂದ ಕಂಟೈನರ್ ಲಾರಿಯನ್ನು ತಡೆದು ತಪಾಸಣೆ ನಡೆಸಿದಾಗ ಎಮ್ಮೆಯ ಕರುಗಳನ್ನು (ಕೋಣ) ಅಕ್ರಮವಾಗಿ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ. ಕಂಟೈನರ್ನಲ್ಲಿ ಒಟ್ಟು 24 ಕರು ಕೋಣಗಳನ್ನು ಹಿಂಸ್ಮಾತಕವಾಗಿ ಕಟ್ಟಿ ಹಾಕಿ ತುಂಬಿ, ಮಾಂಸ ಮಾಡುವ ಉದ್ದೇಶದಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದರು. ಕರುಗಳನ್ನು ರಕ್ಷಣೆ ಮಾಡಲಾಗಿದೆ. ಕಂಟೈನರ್ ವಶಪಡಿಸಿಕೊಂಡಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.
ಈ ಬಗ್ಗೆ ಅಮವಾಸೆಬೈಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ: ವಧೆಗಾಗಿ ಮಂಗಳೂರಿಗೆ ಸಾಗಾಟ ಮಾಡುತ್ತಿದ್ದ ಕೋಣಗಳ ರಕ್ಷಣೆ
- Advertisement -